ಸಚಿವ ಸ್ಥಾನ ಸಿಗದಿದ್ದಕ್ಕೆ ಬಾಲಚಂದ್ರ ಜಾರಕಿಹೊಳಿ ಬೆಂಬಲಿಗರಿಂದ ಆಕ್ರೋಶ

ಮಂಗಳವಾರ, 20 ಆಗಸ್ಟ್ 2019 (11:21 IST)
ಬೆಂಗಳೂರು : ಸಚಿವ ಸಂಪುಟ ವಿಸ್ತರಣೆಯಾದ ಹಿನ್ನಲೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಗೆ ಸಚಿವ ಸ್ಥಾನ ಸಿಗದ್ದಕ್ಕೆ ಅವರ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಬಾಲಚಂದ್ರ ಜಾರಕಿಹೊಳಿ ಸಂಪುಟಕ್ಕೆ ಸೇರುವುದು ಖಚಿತವಾಗಿತ್ತು. ಸಚಿವರ ಪಟ್ಟಿಯಲ್ಲಿ ಅವರ ಹೆಸರು ಕೂಡ ಇತ್ತು. ಆದರೆ ಕೊನೆ ಕ್ಷಣದಲ್ಲಿ ಅವರ ಹೆಸರನ್ನು ಕೈಬಿಡಲಾಗಿದೆ. ನಮಗೆ ಶಾಕ್ ಆಗಿದೆ. ಬಾಲಚಂದ್ರ ಜಾರಕಿಹೊಳಿ ಅವರು ಮುತುವರ್ಜಿ ವಹಿಸಿ ಕ್ಷೇತ್ರದ ತುಂಬಾ ಓಡಾಡಿಕೊಂಡಿದ್ದರು. ಬಹುಶಃ ಇದೆಲ್ಲ ಹೈಕಮಾಂಡ್ ನಿರ್ಧಾರವಾಗಿದೆ. ಮೊದಲ ಲಿಸ್ಟ್ ಗೆ ಅವರನ್ನು ಪರಿಗಣಿಸಬೇಕಾಗಿತ್ತು. ಇದರಿಂದ ನಮಗೆಲ್ಲಾ ಬೇಸರ ತಂದಿದೆ ಎಂದು ಬೆಂಬಲಿಗರು ಹೇಳಿದ್ದಾರೆ.


ಈ ಹಿಂದೆ ಸಿದ್ದರಾಮಯ್ಯ, ಕುಮಾರಸ್ವಾಮಿ ಮತ್ತು ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ರಮೇಶ್ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ ಮತ್ತು ಸತೀಶ್ ಜಾರಕಿಹೊಳಿ ಅವರು ಒಂದಲ್ಲ ಒಂದು ಸರ್ಕಾರದಲ್ಲಿ ಸಚಿವರಾಗಿದ್ದರು. ಆದರೆ ಇದೇ ಮೊದಲ ಬಾರಿಗೆ 15 ವರ್ಷಗಳ ಬಳಿಕ ಜಾರಕಿಹೊಳಿ ಕುಟುಂಬಕ್ಕೆ ಮಂತ್ರಿಗಿರಿ ಕೈ ತಪ್ಪಿದೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ