ಕೆಲ ಮುಸ್ಲಿಂ ಸಂಘಟನೆಗಳನ್ನು ನಿಷೇಧಿಸಲು ಒತ್ತಾಯ: ಬಿಎಸ್‌ವೈ

ಸೋಮವಾರ, 17 ಜುಲೈ 2017 (15:31 IST)
ಕೆಲ ಮುಸ್ಲಿಂ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಗೃಹ ಸಚಿವ ರಾಜನಾಥ್ ಸಿಂಗ್‌ರಿಗೆ ಮನವಿ ಮಾಡಿದ್ದಾರೆ. 
 
ಹಿಂದು ನಾಯಕರ ಮೇಲೆ ಪ್ರತಿನಿತ್ಯ ನಡೆಯುತ್ತಿರುವ ಹಲ್ಲೆ, ಹತ್ಯೆಗಳ ಹಿಂದೆ ಕೆಲ ಮುಸ್ಲಿಂ ಸಂಘಟನೆಗಳ ಕೈವಾಡವಿದ್ದು, ಅಂತಹ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಗೃಹ ಸಚಿವ ರಾಜನಾಥ್ ಸಿಂಗ್‌ರಿಗೆ ಮನವಿ ಮಾಡಿದ್ದಾರೆ. 
 
ಕರಾವಳಿ ಭಾಗದಲ್ಲಿ ನಡೆದ ಹಿಂದು ಮುಖಂಡರ ಹಲ್ಲೆ ಮತ್ತು ಹತ್ಯೆಯ ಹಿಂದಿರುವ ಆರೋಪಿಗಳ ಪತ್ತೆಯಾಗಿಲ್ಲ. ಆರೋಪಿಗಳನ್ನು ಕೂಡಲೇ ಪತ್ತೆ ಮಾಡುವಂತೆ ಒತ್ತಡ ಹೇರಬೇಕು ಎಂದು ಕೋರಿದ್ದಾರೆ.
 
ಮಂಗಳೂರು, ಬಂಟ್ವಾಳ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೆಲ ಮುಸ್ಲಿಂ ಸಂಘಟನೆಗಳು ಹಿಂದುಗಳನ್ನು ಗುರಿಯಾಗಿಸಿಕೊಂಡು ದೌರ್ಜನ್ಯ ನಡೆಸುತ್ತಿವೆ. ಆದಾಗ್ಯೂ ಸರಕಾರ ಯಾವುದೇ ಕಠಿಣ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಗೃಹ ಸಚಿವ ರಾಜನಾಥ್ ಸಿಂಗ್‌ ಅವರಿಗೆ ಸಲ್ಲಿಸಿದ ಮನವಿಯಲ್ಲಿ ದಾಖಲಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ