ನಂದಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶ ನಿಷೇಧ?

ಶನಿವಾರ, 2 ಸೆಪ್ಟಂಬರ್ 2023 (16:42 IST)
ಚಿಕ್ಕಾಬಳ್ಳಾಪುರ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ನಂದಿಬೆಟ್ಟಕ್ಕೆ ಇನ್ಮುಂದೆ ಖಾಸಗಿ ಮತ್ತು ವೈಯಕ್ತಿಕ ವಾಹನಗಳ ಪ್ರವೇಶವನ್ನು ನಿಷೇಧಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಬೆಂಗಳೂರಿನಿಂದ 60 ಕಿ.ಮೀ ದೂರದಲ್ಲಿರುವ ಪ್ರವಾಸಿ ತಾಣ ನಂದಿಬೆಟ್ಟಕ್ಕೆ ವಾರಾಂತ್ಯದಲ್ಲಿ ಸಾಕಷ್ಟು ಜನರು ಭೇಟಿ ನೀಡುತ್ತಾರೆ. ಇದರಿಂದ ಸಾಕಷ್ಟು ಪ್ರಮಾಣದಲ್ಲಿ ಟ್ರಾಫಿಕ್ ಸಮಸ್ಯೆ ಕೂಡ ಉಂಟಾಗುತ್ತಿದೆ. ಈ ಹಿನ್ನೆಲೆ ಪ್ರವಾಸಿಗರಿಗಾಗಿ ಎಲೆಕ್ಟ್ರಾನಿಕ್​ ಬಸ್​ಗಳನ್ನು ಕಲ್ಪಿಸಲು ನಿರ್ಧರಿಸಲಾಗುತ್ತಿದೆ. ಇದು ಪ್ರವಾಸೋದ್ಯಮ ಇಲಾಖೆ ಯೋಜನೆಯ ಒಂದು ಭಾಗವಾಗಿದ್ದು, ಮುಂದಿನ 6-8 ತಿಂಗಳಲ್ಲಿ ನಂದಿ ಬೆಟ್ಟವನ್ನು ಒಂದು ದಿನದ ಪ್ರವಾಸೋದ್ಯಮ ತಾಣವನ್ನಾಗಿ ಅಭಿವೃದ್ಧಿಪಡಿಸುವ ಗುರಿಯನ್ನು ಹೊಂದಲಾಗಿದೆ. ನಂದಿಬೆಟ್ಟ ಸುತ್ತಮುತ್ತಲಿನ ಪ್ರದೇಶದಲ್ಲಿ ಖಾಸಗಿ ಮತ್ತು ವೈಯಕ್ತಿಕ ವಾಹನಗಳ ಸಂಚಾರ ಕಡಿಮೆ ಮಾಡುವ ಮೂಲಕ ಪ್ರವಾಸಿಗರಿಗೆ ಪ್ರಕೃತಿಯ ರಮಣೀಯ ಸೌಂದರ್ಯ ಮತ್ತು ಐತಿಹಾಸಿಕ ಸ್ಥಳದ ಮಹತ್ವವನ್ನು ಆನಂದಿಸಲು ಸುರಕ್ಷಿತ ವಾತಾವರಣವನ್ನು ಸೃಷ್ಟಿಸಲು ಪ್ರವಾಸೋದ್ಯಮ ಇಲಾಖೆ ಮುಂದಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ