ತಾಕತ್ತಿದ್ದರೆ ಆರ್​ಎಸ್​ಎಸ್ ಮತ್ತು ಬಜರಂಗದಳವನ್ನು ನಿಷೇಧಿಸಲಿ

ಶುಕ್ರವಾರ, 26 ಮೇ 2023 (20:14 IST)
ಆರ್​ಎಸ್​ಎಸ್​ ಮತ್ತು ಬಜರಂಗದಳ ನಿಷೇಧ ಮಾಡುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ. ತುಷ್ಟೀಕರಣಕ್ಕಾಗಿ ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ. ಈ ಹಿಂದೆಯೂ ಆರ್​ಎಸ್​ಎಸ್​ ಅನ್ನು ನಿಷೇಧ ಮಾಡುವ ಕೆಲಸ ನಡೆದಿತ್ತು. ಅವರನ್ನು ಜನತೆ ಮನೆಗೆ ಕಳಿಸಿದ್ದಾರೆ. ಸಂಘ ಪರಿವಾರವನ್ನು ನಿಷೇಧ ಮಾಡುವ ಶಕ್ತಿ ಯಾರಿಗೂ ಇಲ್ಲ. ಅವರಿಗೆ ತಾಕತ್ತಿದ್ದರೆ ಆರ್​ಎಸ್​ಎಸ್ ಮತ್ತು ಬಜರಂಗದಳವನ್ನು ನಿಷೇಧಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸವಾಲು ಹಾಕಿದ್ದಾರೆ.
 
ಆರ್.ಟಿ ನಗರ ನಿವಾಸದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೂತನ ಸರ್ಕಾರ ರಚನೆ ಆಗಿದೆ. ಸಿಎಂ, ಡಿಸಿಎಂ ಜೊತೆ 8 ಜನರು ಕೂಡ ಸಚಿವರು ಆಗಿದ್ದಾರೆ. ಆ 8 ಸಚಿವರು ಮಾತಾಡೋದು ನೋಡಿದರೆ ದ್ವೇಷದ, ಸೇಡಿನ ರಾಜಕಾರಣ ಮಾಡಲು ಪ್ರಾರಂಭ ಮಾಡಿರುವುದು ಸ್ಪಷ್ಟವಾಗಿ ಗೊತ್ತಾಗುತ್ತದೆ. ಅಭಿವೃದ್ಧಿಗಿಂತ ಸೇಡು, ದ್ವೇಷದ ರಾಜಕಾರಣ ಅವರಿಗೆ ಮುಖ್ಯವಾಗಿದೆ. ಅವರು ಏನೇ ಮಾಡಿದರೂ ಅದನ್ನು ಎದರಿಸಲು ನಾವು ಸಿದ್ದರಿದ್ದೇವೆ. ಇದನ್ನು ನಾವು ಸಮರ್ಥವಾಗಿ ಎದುರಿಸುವುದಲ್ಲದೇ ಅವರ ವಿಚಾರವನ್ನು ನಾವು ಹಿಮ್ಮೆಟ್ಟಿಸುತ್ತೇವೆ ಎಂದು ಟಾಂಗ್ ನೀಡಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ