ಬಾಣಂತಿಯರ ಸಾವು ಪ್ರಕರಣ, ಮುಲಾಜಿಲ್ಲದೆ ತಪ್ಪಿತಸ್ಥರ ವಿರುದ್ಧ ಕ್ರಮ: ದಿನೇಶ್‌ ಗುಂಡೂರಾವ್

Sampriya

ಭಾನುವಾರ, 8 ಡಿಸೆಂಬರ್ 2024 (16:43 IST)
Photo Courtesy X
ಬಳ್ಳಾರಿ:  ಬಿಮ್ಸ್ ಆಸ್ಪತ್ರೆಯಲ್ಲಿ ನಡೆದ ಸರಣಿ ಬಾಣಂತಿಯರ ಸಾವು ಪ್ರಕರಣವನ್ನು ಖಂಡಿಸಿ ಮಾಜಿ ಸಚಿವ ಶ್ರೀರಾಮುಲು ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್ ಅವರು ಭೇಟಿ ನೀಡಿದರು.  ಈ ವೇಳೆ ಮಾತನಾಡಿದ ಅವರು,  ಐವಿ ಫ್ಲ್ಯೂಯೆಡ್‌ ಕಂಪನಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಹೋಗುತ್ತಿದ್ದೇವೆ. ಬಾಣಂತಿಯರ ಸರಣಿ ಸಾವಿನ ಬಗ್ಗೆ ಸಂಪೂರ್ಣ ತನಿಖೆ ಆಗಲಿದೆ ಎಂದು ಹೇಳಿದ್ದಾರೆ.

ಬಳ್ಳಾರಿ ಜಿಲ್ಲಾಸ್ಪತ್ರೆಯ ಹೆರಿಗೆ ವಾರ್ಡ್‌ಗೆ ಭೇಟಿ ನೀಡಿದ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್ ಪರಿಶೀಲನೆ ಮಾಡಿದ್ದು, ಡಿಹೆಚ್‌ಒ, ಜಿಲ್ಲಾ ಸರ್ಜನ್‌ರಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಪರಿಶೀಲನೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಾಣಂತಿಯರ ದಿಢೀರ್ ಸಾವಾಗಿದೆ, ವೈದ್ಯರ ಮೂಲಕ ವರದಿ ಕೇಳಿದ್ವಿ. ಐವಿ ಫ್ಲ್ಯೂಯೆಡ್‌ ಬಗ್ಗೆ ಅನುಮಾನವಿತ್ತು, ಲ್ಯಾಬ್‌ನಲ್ಲಿ ಟೆಸ್ಟ್‌ ಮಾಡಲಾಗಿತ್ತು. ಲ್ಯಾಬ್‌ನಲ್ಲಿ ಟೆಸ್ಟ್‌ ಬಳಿಕ ಐವಿ ಬಳಕೆ ನಿಷೇಧ ಮಾಡಲಾಗಿತ್ತು ಎಂದಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡ ಅವರು,  ಜಿಲ್ಲಾಸ್ಪತ್ರೆಯ ಮುಂಭಾಗ ಮಾಜಿ ಸಚಿವರಾದ ಶ್ರೀರಾಮುಲು ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ, ಅವರ ಬೇಡಿಕೆಗಳನ್ನು ಆಲಿಸಿದೆ.

ಬಾಣಂತಿಯರ ಸಾವು ಪ್ರಕರಣದಲ್ಲಿ ನಿಷ್ಪಕ್ಷವಾದ ತನಿಖೆ ನಡೆಯುತ್ತಿದೆ. ತಪ್ಪಿತಸ್ಥರ ವಿರುದ್ಧ ಯಾವುದೇ ಮುಲಾಜಿಲ್ಲಾದೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಹೀಗಾಗಿ ಕೂಡಲೇ ಉಪವಾಸ ಸತ್ಯಾಗ್ರಹ ಕೈಬಿಡುವಂತೆ  ಬಿಜೆಪಿ ನಾಯಕರಿಗೆ ತಿಳಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ