ಸಚಿವರ ರಾಜೀನಾಮೆಗೆ ಒತ್ತಾಯಿಸಿ ಕೂಡ್ಲಿಗಿ ಪಟ್ಟಣದಲ್ಲಿ ಬಂದ್ ಕರೆ

ಶನಿವಾರ, 30 ಜನವರಿ 2016 (12:38 IST)
ಬಳ್ಳಾರಿ ಡಿವೈಎಸ್‌ಪಿ ಅನುಪಮಾ ಶೆಣೈ ಎತ್ತಂಗಡಿಗೆ ಸಂಬಂಧಿಸಿದಂತೆ ಸಚಿವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕೂಡ್ಲಿಗಿ ಪಟ್ಟಣದಲ್ಲಿ   ಬಂದ್ ಕರೆ ನೀಡಲಾಗಿದೆ. ವಿವಿಧ ಸಂಘಟನೆಗಳು ಈ ಬಂದ್‌ಗೆ ಕರೆ ನೀಡಿದ್ದು, ಕೂಡಲೇ ಡಿವೈಎಸ್‌ಪಿಯನ್ನು ವಾಪಸ್ ಕರೆಸಿಕೊಳ್ಳಬೇಕು ಮತ್ತು ಪರಮೇಶ್ವರ್ ನಾಯಕ್ ಅವರನ್ನು ಸಂಪುಟದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿ ಭಾರೀ ಪ್ರತಿಭಟನೆಯಲ್ಲಿ ನಿರತರಾಗಿದ್ದಾರೆ.

ಮದಕರಿ ಸರ್ಕಲ್‌ನಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಜನರು ಆಕ್ರೋಶ ವ್ಯಕ್ತಪಡಿಸಿದರು. ದಕ್ಷ, ಪ್ರಾಮಾಣಿಕ ಅಧಿಕಾರಿ ಅನುಪಮ ಶೆಣೈ ಅವರನ್ನು ವಾಪಸ್ ಕರೆಸಿಕೊಳ್ಳುವಂತೆ ಪ್ರತಿಭಟನೆಕಾರರು ಒತ್ತಾಯಿಸಿದರು.

ಅನುಪಮ ಶೆಣೈ ತಮ್ಮ ಫೋನ್ ಕರೆ ಸ್ವೀಕರಿಸಲಿಲ್ಲವಾದ್ದರಿಂದ ವರ್ಗ ಮಾಡಿದ್ದಾಗಿ ಸಚಿವ ಪರಮೇಶ್ವರ ನಾಯಕ್ ಕಾರ್ಯಕರ್ತರ ಸಭೆಯಲ್ಲಿ ಹೇಳಿದ್ದರಿಂದ ವಿವಾದ ಉದ್ಭವಿಸಿತ್ತು. ಈ ವಿವಾದದ ಬೆನ್ನಲ್ಲೇ ಅನುಪಮ ಶೆಣೈ ಅವರನ್ನು 15 ದಿನಗಳ ರಜೆ ಮೇಲೆ ಕಳಿಸಲಾಗಿತ್ತು. 

ವೆಬ್ದುನಿಯಾವನ್ನು ಓದಿ