ಮಂಡ್ಯ : ಕಬ್ಬಿನ ದರ ನಿಗದಿ, ಹಾಲಿನ ದರ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ತೋರುತ್ತಿರುವ ನಿರ್ಲಕ್ಷ್ಯ ಖಂಡಿಸಿ ಇಂದು ರಾಜ್ಯ ರೈತ ಸಂಘ ಮಂಡ್ಯ ನಗರ ಬಂದ್ಗೆ ಕರೆ ನೀಡಿದೆ.
ಮಂಡ್ಯ ಬಂದ್ಗೆ ಕೆಲ ದಲಿತ ಸಂಘಟನೆಗಳು, ರೈತ ಪರ ಮತ್ತು ಪ್ರಗತಿಪರ ಸಂಘಟನೆಗಳು, ಕನ್ನಡ ಸಂಘಟನೆಗಳು ಸೇರಿದಂತೆ ಸಂಘ ಸಂಸ್ಥೆಗಳು ಬೆಂಬಲ ಸೂಚಿಸಿವೆ.
ಬಂದ್ಗೆ ನಗರದ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಬೆಂಬಲ ವ್ಯಕ್ತಪಡಿಸಲು ವರ್ತಕರು ಒಪ್ಪಿದ ಹಿನ್ನೆಲೆಯಲ್ಲಿ ಮಧ್ಯಾಹ್ನ 2 ಗಂಟೆಯವರೆಗೆ ಬಂದ್ ನಡೆಯಲಿದೆ.
ಕಬ್ಬು ಸೇರಿದಂತೆ ವಿವಿಧ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿ ಪಡಿಸಬೇಕು. ಪ್ರತಿ ಲೀಟರ್ ಹಾಲಿಗೆ 40 ರೂ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.
ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಕಳೆದ 43 ದಿನಗಳಿಂದ ಪ್ರತಿ ಟನ್ ಕಬ್ಬಿಗೆ ಕನಿಷ್ಠ 500 ರೂ. ಎಚ್ಚುವರಿ ಎಸ್ಎಪಿ ಘೋಷಣೆಯಾಗಬೇಕು ಎಂದು ಆಗ್ರಹಿಸಿ ರೈತರು ಪ್ರತಿಭಟಿಸುತ್ತಿದ್ದಾರೆ.