ಬೆಂಗಳೂರಿನಲ್ಲಿ ಮದ್ಯ ಮಾರಾಟ ಬಂದ್

ಮಂಗಳವಾರ, 4 ಅಕ್ಟೋಬರ್ 2022 (16:24 IST)
ಬೆಂಗಳೂರು ಉತ್ತರ, ಬೆಂಗಳೂರು ಪೂರ್ವ, ಮಧ್ಯ ಬೆಂಗಳೂರು ಮತ್ತು ಈಶಾನ್ಯ ಬೆಂಗಳೂರಿನ ಹಲವು ಭಾಗಗಳಲ್ಲಿ ಈ ನಿಷೇಧ ಜಾರಿಯಲ್ಲಿರುತ್ತದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸಿಎಚ್ ಪ್ರತಾಪ್ ರೆಡ್ಡಿ ತಿಳಿಸಿದ್ದಾರೆ.
ಬೆಂಗಳೂರಿನ ಎಲ್ಲೆಡೆ ಮದ್ಯ ಮಾರಾಟ ನಿಷೇಧ ಇರುವುದಿಲ್ಲ. ಕೆಲ ಅಯ್ದ ಸ್ಥಳಗಳಲ್ಲಿ ಕ್ರಮ ಜಾರಿಯಲ್ಲಿರುತ್ತದೆ. ನಿಷೇಧಿತ ವಲಯದಲ್ಲಿ ಯಾವುದೇ ಎಂಎಸ್‌ಐಎಲ್ ಅಂಗಡಿಗಳು, ಬಾರ್ ಅಂಡ್ ರೆಸ್ಟೋರೆಂಟ್‌ಗಳು, ಬಿಯರ್ ಮತ್ತು ವೈನ್ ಸ್ಟೋರ್‌ಗಳು ಮತ್ತು ಪಬ್‌ಗಳನ್ನು ಎರಡು ದಿನ ತೆರೆಯಲು ಅವಕಾಶ ಇರುವುದಿಲ್ಲ. ಆದರೆ, ಸ್ಟಾರ್ ಹೋಟೆಲ್ ಮತ್ತು ಕ್ಲಬ್‌ಗಳಲ್ಲಿ ಮದ್ಯ ಮಾರಾಟಕ್ಕೆ ತಡೆ ಇರುವುದಿಲ್ಲ.
 
 
ಎಲ್ಲೆಲ್ಲಿ ಮದ್ಯ ಮಾರಾಟ ನಿಷೇಧ?
ಉತ್ತರ ಬೆಂಗಳೂರು: ಆರ್‌ಟಿ ನಗರ, ಜೆಸಿ ನಗರ, ಸಂಜಯನಗರ ಮತ್ತು ಹೆಬ್ಬಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮದ್ಯ ನಿಷೇಧ ಜಾರಿಯಲ್ಲಿರುತ್ತದೆ.
 
ಪೂರ್ವ ಬೆಂಗಳೂರು: ಭಾರತಿನಗರ, ಪುಲಕೇಶಿನಗರ, ಕೆಜಿ ಹಳ್ಳಿ, ಡಿಜೆ ಹಳ್ಳಿ ಮತ್ತು ಶಿವಾಜಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮದ್ಯದಂಗಡಿಗಳನ್ನು ತೆರೆಯುವಂತಿಲ್ಲ.
 
ಮಧ್ಯ ಬೆಂಗಳೂರು: ಹೈಗ್ರೌಂಡ್ಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಇದೆ.
 
ಈಶಾನ್ಯ ಬೆಂಗಳೂರು: ಅಮೃತಹಳ್ಳಿ ಮತ್ತು ಕೊಡಿಗೇಹಳ್ಳಿಯಲ್ಲಿ ಮದ್ಯ ಮಾರಾಟ ಇರುವುದಿಲ್ಲ.
 
ಈ ಮೇಲಿನ ಪ್ರದೇಶಗಳಲ್ಲಿ ಬುಧವಾರ ಮತ್ತು ಗುರುವಾರದಂದು ಪೊಲೀಸರು ಕಣ್ಗಾವಲು ಇರಿಸಲಿದ್ದು, ಮದ್ಯದಂಗಡಿ ತೆರೆದಿರದಂತೆ ಎಚ್ಚರ ವಹಿಸಲಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ