ರಾಜ್ಯದಲ್ಲಿ ಅತ್ಯಾಚಾರ ಪ್ರಕರಣಗಳ ಏರಿಕೆ ಖಂಡಿಸಿ ಜುಲೈ 31 ರಂದು ಬೆಂಗಳೂರು ಬಂದ್

ಶುಕ್ರವಾರ, 25 ಜುಲೈ 2014 (18:40 IST)
ರಾಜ್ಯದಲ್ಲಿ ಹೆಚ್ಚುತ್ತಿರುವ ಮಹಿಳೆಯರ ಮೇಲಿನ ಲೈಂಗಿಕ ಶೋಷಣೆಯನ್ನು ಖಂಡಿಸಿ ಅನೇಕ ಸಂಘಟನೆಗಳು ಜಂಟಿಯಾಗಿ ಜುಲೈ 31 ರಂದು ಬೆಂಗಳೂರು ಬಂದ್‌ಗೆ ಕರೆ ನೀಡಿವೆ.

ಈ ಕುರಿತು ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದ  ಕನ್ನಡ ಚಳುವಳಿ ವಾಟಾಳ ಪಕ್ಷದ ನಾಯಕ ವಾಟಾಳ ನಾಗರಾಜ್  ಆ ದಿನ ಪುರಭವನದಿಂದ ಮುಖ್ಯಮಂತ್ರಿ ಮನೆಯವರೆಗೂ ಮೈಸೂರು ರಸ್ತೆ ಮಾರ್ಗವಾಗಿ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗುವುದು ಎಂದು ಹೇಳಿದ್ದಾರೆ. 
 
12 ತಾಸುಗಳ ಬಂದ್ ಅಂದು ಬೆಳಿಗ್ಗೆ 6 ಗಂಟೆಗೆ ಪ್ರಾರಂಭವಾಗಿ ಸಂಜೆ 6 ಗಂಟೆಗೆ ಕೊನೆಗೊಳ್ಳಲಿದೆ. ಸರಕಾರಿ ನೌಕರರು ಮತ್ತು ವಕೀಲರ ಸಂಘ ಕೂಡ ಬಂದ್‌ಗೆ ಬೆಂಬಲ ನೀಡಲಿದೆ. ಹಾಲು ಪೂರೈಕೆ, ಅಂಬುಲೆನ್ಸ್ ಮತ್ತು ಮೆಡಿಕಲ್ ಶಾಪ್‌ಗಳಿಗೆ ಬಂದ್‌ನಿಂದ ವಿನಾಯತಿ 
 
ಕೆಎಸ್ಆರ್‌ಟಿಸಿ ಅಧ್ಯಕ್ಷ ಅನಂತ ಸುಬ್ಬರಾವ್, ಬಿಎಂಟಿಸಿ ನೌಕರರ ಸಂಘ, ಚಲನಚಿತ್ರ ನಿರ್ಮಾಪಕ ಸಾ.ರಾ. ಗೋವಿಂದು, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಶಿವರಾಮೇಗೌಡ, ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಸುಬ್ಬ ರೆಡ್ಡಿ, ಮತ್ತು ಇತರರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ವೆಬ್ದುನಿಯಾವನ್ನು ಓದಿ