ಬೆಂಗಳೂರು ಉಗ್ರರ ಸುರಕ್ಷಿತ ತಾಣವಾಗುತ್ತಿದೆ : ಬಸವರಾಜ ಬೊಮ್ಮಾಯಿ

ಬುಧವಾರ, 19 ಜುಲೈ 2023 (14:49 IST)
ಬೆಂಗಳೂರು : ರಾಜಧಾನಿ ಬೆಂಗಳೂರು ಉಗ್ರರ ಸುರಕ್ಷಿತ ತಾಣವಾಗಿ ಪರಿವರ್ತನೆಯಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ ಎರಡು ತಿಂಗಳಿಂದ ಬೆಂಗಳೂರಿನ ಕ್ರೈಮ್ ಹೆಚ್ಚಾಗುತ್ತಿದೆ. ಬೆಂಗಳೂರಿನ ಕಾನೂನು ಸುವ್ಯವಸ್ಥೆ ಅಪರಾದ ನಿಯಂತ್ರಣ ಕೈ ತಪ್ಪಿದೆ. ದಿನನಿತ್ಯ ಕೊಲೆ ಸುಲಿಗೆ ಸಾಮಾನ್ಯವಾಗುತ್ತಿದೆ ಎಂದು ಹೇಳಿದರು.

ಬಹಳಷ್ಟು ಕೇಸ್ಗಳು ಪೊಲೀಸ್ ಸ್ಟೇಶನಲ್ಲಿ ರಿಜಿಸ್ಟರ್ ಆಗುತ್ತಿಲ್ಲ. ಕಾನೂನು ಸುವ್ಯವಸ್ಥೆ, ಅಪರಾಧ ನಿಯಂತ್ರಣ ಮಾಡುವುದು ಪೊಲೀಸರ ಕೆಲಸ. ಈ ಸರ್ಕಾರ ಬಂದಮೇಲೆ ಮಧ್ಯವರ್ತಿಗಳು ಕೈ ಹಾಕಿ ನಿಯಂತ್ರಣ ಮಾಡಲು ಪ್ರಯತ್ನ ಮಾಡುತ್ತಿದ್ದಾರೆ. ಇದಕ್ಕೆ ಸರ್ಕಾರ ಅವಕಾಶ ಕೊಡಬಾರದು. ಬೆಂಗಳೂರಿನಲ್ಲಿ ಕ್ಲಬ್ ಚಟುವಟಿಕೆಗಳು ಹೆಚ್ಚಾಗಿದೆ, ಹಫ್ತಾ ವಸೂಲಿ ತೀವ್ರವಾಗುತ್ತಿದೆ ಎಂದು ಆರೋಪಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ