ಬೆಂಗಳೂರು ತಂತ್ರಜ್ಞಾನ, ನಾವೀನ್ಯತೆದ ತವರು : ಮೋದಿ

ಗುರುವಾರ, 17 ನವೆಂಬರ್ 2022 (13:31 IST)
ಬೆಂಗಳೂರು : ಭಾರತದಲ್ಲಿ ಮೂಲಸೌಲಭ್ಯ ಅಭಿವೃದ್ಧಿಗೆ ಮುಂಬರುವ ದಿನಗಳಲ್ಲಿ 100 ಟ್ರಿಲಿಯನ್ ಡಾಲರ್ (7,539 ಲಕ್ಷ ಕೋಟಿ)  ನಷ್ಟು ಅಗಾಧ ಮೊತ್ತವನ್ನು ಹೂಡಲಾಗುವುದು.

ದೇಶದಲ್ಲಿ ಬಂಡವಾಳ ಹೂಡಿಕೆದಾರರ ಪಾಲಿಗೆ ಹಿಂದಿನ ಕೆಂಪುಪಟ್ಟಿಯ ಸಮಸ್ಯೆ ಕೊನೆಗೊಂಡಿದ್ದು, ಈಗ ರತ್ನಗಂಬಳಿಯ ಸ್ವಾಗತವಿದೆ. ಅದರಲ್ಲೂ ಬೆಂಗಳೂರು ತಂತ್ರಜ್ಞಾನ, ನಾವೀನ್ಯತೆ ಮತ್ತು ಸಮರ್ಥ ನಾಯಕತ್ವದ ತವರಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

25ನೇ ಪ್ರತಿಷ್ಠಿತ ಬೆಂಗಳೂರು ತಂತ್ರಜ್ಞಾನ ಶೃಂಗಸಭೆಯನ್ನು ಉದ್ದೇಶಿಸಿ ವರ್ಚುವಲ್ ಮೂಲಕ ಮಾತನಾಡಿದ ಅವರು, ತಂತ್ರಜ್ಞಾನಕ್ಕೆ ಮಾನವೀಯ ಮತ್ತು ಪ್ರಜಾಸತ್ತಾತ್ಮಕ ಸ್ಪರ್ಶವನ್ನು ನೀಡುತ್ತಲೇ ಇರುವುದು ಭಾರತದ ಅನನ್ಯ ಸಾಧನೆಯಾಗಿದೆ.

ಅದರಲ್ಲೂ ತಂತ್ರಜ್ಞಾನವು ನಮಗೆ ಬಡತನದ ವಿರುದ್ಧದ ಹೋರಾಟಕ್ಕೆ ಶಕ್ತಿಶಾಲಿ ಅಸ್ತ್ರವಾಗಿದೆ ಎಂದರು. ಐಟಿ, ಬಿಟಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಇಲಾಖೆಯು ಭಾರತೀಯ ಸಾಫ್ಟ್ವೇರ್ ತಂತ್ರಜ್ಞಾನ ಪಾರ್ಕ್ಗಳ ಒಕ್ಕೂಟದ ಸಹಯೋಗದಲ್ಲಿ ಈ ಸಮಾವೇಶವನ್ನು ಏರ್ಪಡಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ