ಬೆಂಗಳೂರು ಎಂಎಎಲ್​ಸಿ ಚುನಾವಣೆ

ಗುರುವಾರ, 9 ಡಿಸೆಂಬರ್ 2021 (14:09 IST)
ಬೆಂಗಳೂರು : ರಾಜಧಾನಿ ಬೆಂಗಳೂರು ನಗರ ಎಂಎಎಲ್ಸಿ ಚುನಾವಣೆ ವಿಚಾರ ನಡೆಸುವ ವಿಚಾರವಾಗಿ ರಾಜ್ಯ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.

ವಿಧಾನ ಪರಷತ್ ಚುನಾವಣೆಯಲ್ಲಿ ನಾಮನಿರ್ದೇಶಿತ ಸದಸ್ಯರ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ ಮತಗಳನ್ನು ಮುಚ್ಚಿದ ಲಕೋಟೆಯಲ್ಲಿ ಹಾಕಿ ಇಡಬೇಕು. ಕೋರ್ಟ್ ಅನುಮತಿಯಿಲ್ಲದೆ ಫಲಿತಾಂಶ ಪ್ರಕಟಿಸಬಾರದು ಎಂದು ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಆದೇಶ ನೀಡಿದೆ.
ಇನ್ನು ಚುನಾವಣೆಯಲ್ಲಿ 15 ನಾಮನಿರ್ದೇಶಿತ ಸದಸ್ಯರ ಮತದಾನಕ್ಕೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಬೇಕು ಎಂದೂ ಹೈ ನ್ಯಾಯ ಪೀಠ ಸೂಚಿಸಿದೆ.
ಕರ್ನಾಟಕ ವಿಧಾನ ಪರಿಷತ್ನ 25 ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ ನಿಗದಿಯಾಗಿದೆ. ನಾಳೆ ಡಿಸೆಂಬರ್ 10ರಂದು ರಾಜ್ಯ ಮೇಲ್ಮನೆಯ 25 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ನವೆಂಬರ್ 16ರಂದು ಮೇಲ್ಮನೆ ಚುನಾವಣೆಗೆ ಅಧಿಸೂಚನೆ ಪ್ರಕಟವಾಗಿದ್ದು,ಡಿಸೆಂಬರ್ 10 ಶುಕ್ರವಾರ ಬೆಳಗ್ಗೆ 8ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದೆ. ಡಿಸೆಂಬರ್ 14ರಂದು (ಮಂಗಳವಾರ) 25 ಸ್ಥಾನಗಳ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ