ಮಹಿಳೆಯರ ರಕ್ಷಣೆಗಾಗಿ ಬೆಂಗಳೂರು ಪೊಲೀಸ್ ರಿಂದ ‘ಉಚಿತ ಸವಾರಿ’ ಯೋಜನೆ ಜಾರಿ

ಗುರುವಾರ, 12 ಡಿಸೆಂಬರ್ 2019 (10:39 IST)
ಬೆಂಗಳೂರು : ಇತ್ತೀಚೆಗೆ ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಇದೀಗ ಬೆಂಗಳೂರು ಪೊಲೀಸರು ಮಹಿಳೆಯರ ರಕ್ಷಣೆಗೆ ಹೊಸ ಯೋಜನೆಯೊಂದನ್ನು ಜಾರಿಗೆ ತಂದಿದೆ.


ಮಹಿಳೆಯರಿಗಾಗಿ ಉಚಿತ ಸವಾರಿ ಯೋಜನೆಯನ್ನು ಪೊಲೀಸ್ ಇಲಾಖೆ ಜಾರಿಗೆ ತಂದಿದೆ. ಇದರಿಂದ ಮಹಿಳೆಯರಿಗೆ ರಾತ್ರಿ ಹೊತ್ತು ಮನೆಗೆ ಹೊಗಲು ಸರಿಯಾದ ಸಾರಿಗೆ ವ್ಯವಸ್ಥೆ ಸಿಗದಿದ್ದಾಗ 1091 ನಂಬರ್ ಗೆ ಕರೆ ಮಾಡಿ ತಿಳಿಸಿದರೆ ಮಹಿಳೆ ಇರುವ ಸ್ಥಳಕ್ಕೆ ಕಂಟ್ರೋಲ್ ರೂಂ ಸಿಬ್ಬಂದಿ  ಹತ್ತಿರ ಠಾಣೆಯ ಹೊಯ್ಸಳ ವಾಹನವನ್ನು ಕಳುಹಿಸುತ್ತಾರೆ.

 

ಇದರಿಂದ ಮಹಿಳೆಯರು ಸುರಕ್ಷಿತವಾಗಿ ಮನೆ ತಲುಪಬಹುದು. ಈ ಮೂಲಕ ರಾತ್ರಿವೇಳೆ ಒಂಟಿ ಮಹಿಳೆಯರ ಮೇಲೆ ನಡೆಯುವ ಅತ್ಯಾಚಾರಕ್ಕೆ ಕಡಿವಾಣ ಹಾಕಲು ಪೊಲೀಸರು ನಿರ್ಧಿರಿಸಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ