ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಮಧ್ಯಾಹ್ನ ಗುಡುಗು ಸಹಿತ ಭಾರೀ ಮಳೆಯಾಗಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಅರಬ್ಬಿ ಸಮುದ್ರದಲ್ಲಿ ಮೇಲುಬ್ಬರ ಉಂಟಾಗಿರುವ ಹಿನ್ನೆಲೆ ರಾಜ್ಯಕ್ಕೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿತ್ತು. ಅದರಂತೆ ಇಂದು ಮಟ ಮಟ ಮಧ್ಯಾಹ್ನವೇ ವರುಣ ದೇವರ ಆಗಮನವಾಗಿದೆ.
ಬೆಳಗ್ಗಿನಿಂದಲೇ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿತ್ತು. ಇದೀಗ ಮಧ್ಯಾಹ್ನ ಕೋರಮಂಗಲ, ಆಡುಗೋಡಿ, ಮಡಿವಾಳ, ಆರ್‌ಟಿ ನಗರ, ಎಂಜಿ ರೋಡ್ ಸೇರಿದಂತೆ ಹಲವೆಡೆ ಭಾರೀ ಮಳೆಯಾಗುತ್ತಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು ಹಾಗೂ ಶಿವಮೊಗ್ಗದಲ್ಲಿ, ಕೊಡಗು, ಕೋಲಾರದಲ್ಲಿ ಭಾರೀ ಮಳೆಯಾಗಲಿದೆ.