ಬೆಂಗಳೂರು ಸುರಕ್ಷಿತವಾದ ಪ್ರದೇಶ, ಅಪಪ್ರಚಾರ ಬೇಡ: ಸಿಎಂ ಮನವಿ

ಶುಕ್ರವಾರ, 6 ಜನವರಿ 2017 (12:23 IST)
ಹೊಸವರ್ಷಾಚರಣೆ ಸಂದರ್ಭದಲ್ಲಿ ಮಹಿಳೆಯರ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಸುರಕ್ಷಿತವಾಗಿದೆ. ಅದರ ಬಗ್ಗೆ ಅಪಪ್ರಚಾರ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಳಿಕೊಂಡಿದ್ದಾರೆ.
 
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಸವರ್ಷಾರಣೆ ಸಂದರ್ಭದಲ್ಲಿ ಕಮ್ಮನಹಳ್ಳಿಯಲ್ಲಿ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಕಾಮುಕರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
 
ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯವೊಂದು ಅಮಾನವೀಯ ಕೃತ್ಯ. ಇಂತಹ ಹೇಯ ಕೃತ್ಯಗಳು ಮರುಕಳಿಸದಂತೆ ಪೊಲೀಸ್ ಇಲಾಖೆ ಜಾಗೃತವಾಗಿದೆ. ಯುವತಿಯರ ಜೊತೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ದೌರ್ಜನ್ಯವೆಸಗುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ರಾಜ್ಯ ಸರಕಾರ ಬದ್ಧವಾಗಿದೆ. ಅಲ್ಲದೆ ಬೆಂಗಳೂರು ಸುರಕ್ಷಿತವಾದ ಪ್ರದೇಶ. ಅದರ ಬಗ್ಗೆ ಅಪಪ್ರಚಾರ ಬೇಡ ಎಂದರು.
 
ಕಾವೇರಿ ಭಾಗದ ಜಲಾಶಯಗಳಲ್ಲಿ ಕುಡಿಯಲು ನೀರಿಲ್ಲ. ಇದೀಗ ತಮಿಳುನಾಡಿಗೆ ನೀರು ಬಿಡುವುದಾದರು ಹೇಗೆ?. ಈ ಕುರಿತು ಮನವರಿಕೆ ಮಾಡಲು ಸುಪ್ರೀಂಕೋರ್ಟ್‌ಗೆ ಪತ್ರ ಬರೆಯುತ್ತೇನೆ. ಮಧ್ಯಂತರ ಅರ್ಜಿ ವಿಚಾರಣೆ ಇತ್ಯರ್ಥವಾಗುವವರೆಗೂ ಯಥಸ್ಥಿತಿ ಕಾಯ್ದುಕೊಳ್ಳುವಂತೆ ಸುಪ್ರೀಂಕೋರ್ಟ್ ನೀಡಿದ ತೀರ್ಪಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ