ರಾಜ್ಯಾದ್ಯಂತ ಒಣ ಹವೆ ಮುಂದುವರಿದಿದೆ. ಆದರೆ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ನಾಳೆಯಿಂದ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರು ನಗರ, ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ ಸೇರಿದಂತೆ ಬೆಂಗಳೂರಿನ ಸುತ್ತಮುತ್ತಲ ಜಿಲ್ಲೆಗಳಲ್ಲಿ ನಾಳೆಯಿಂದ ಮಳೆಯಾಗುವ ಸಾಧ್ಯತೆಯಿದೆ.
ಕರಾವಳಿ ಜಿಲ್ಲೆಗಳಲ್ಲಿ ನವಂಬರ್ 13 ರಿಂದ ಮಳೆ ನಿರೀಕ್ಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿರುವುದಾಗಿ ಹವಾಮಾನ ಇಲಾಖೆ ಹೇಳಿದೆ. ಕರಾವಳಿ ಜಿಲ್ಲೆಗಳಲ್ಲಿ ನಿನ್ನೆ ಕೆಲವೆಡೆ ಸಣ್ಣ ಮಳೆಯಾಗಿತ್ತು.
ಬೆಂಗಳೂರಿನಲ್ಲಿ ಇಂದು ಒಂದು ರೀತಿಯ ಮೋಡ ಕವಿದ ವಾತಾವರಣವಿದೆ. ಬಿಸಿಲಿನ ತೀವ್ರತೆ ಕೊಂಚ ಕಡಿಮೆಯಾಗಿದ್ದು, ನಾಳೆ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ಇತರೆ ಎಲ್ಲಾ ಜಿಲ್ಲೆಗಳಲ್ಲಿ ನವಂಬರ್ 14 ರಿಂದ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.