ಬೆಂಗಳೂರಿನಲ್ಲಿ ಬಂದ್ ವಾತಾವರಣ

ಶನಿವಾರ, 24 ಏಪ್ರಿಲ್ 2021 (09:49 IST)
ಬೆಂಗಳೂರು: ಕೊರೋನಾ ಪ್ರಕರಣ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ ವೀಕೆಂಡ್ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ಇದರಿಂದಾಗಿ ರಾಜ್ಯ ರಾಜಧಾನಿಯಲ್ಲಿ ಬಂದ್ ವಾತಾವರಣವಿದೆ.


ಇಂದು ಮತ್ತು ನಾಳೆ ಲಾಕ್ ಡೌನ್ ಜಾರಿಯಲ್ಲಿರಲಿದ್ದು, ಉಳಿದಂತೆ ನೈಟ್ ಮೇ 4 ರವರೆಗೆ ಕರ್ಫ್ಯೂ ಮುಂದುವರಿಯಲಿದೆ. ನಿನ್ನೆ ಮಧ್ಯಾಹ್ನದಿಂದಲೇ ಪೊಲೀಸರು ಅಂಗಡಿಗಳನ್ನು ಮುಚ್ಚಿಸುವ ಕೆಲಸ ಆರಂಭಿಸಿದ್ದಾರೆ.

ಇಂದಿನಿಂದ ಕೇವಲ ಅಗತ್ಯ ವಸ್ತುಗಳ ಅಂಗಡಿಗಳು, ಔಷಧಾಲಯ, ಹಾಲು ಮಾತ್ರ ತೆರೆದಿದೆ. ಮಾಲ್, ಶಾಪಿಂಗ್ ಕಾಂಪ್ಲೆಕ್ಸ್ ಗಳನ್ನು ನಿನ್ನೆಯಿಂದಲೇ ಮುಚ್ಚಿಸಲಾಗಿದೆ. ಅನಗತ್ಯವಾಗಿ ಖಾಸಗಿ ವಾಹನಗಳ ಸಂಚಾರಕ್ಕೂ ನಿರ್ಬಂಧ ವಿಧಿಸಲಾಗಿದೆ. ಎರಡು ದಿನಗಳ ಲಾಕ್ ಡೌನ್ ಹಿನ್ನಲೆಯಲ್ಲಿ ನಿನ್ನೆಯೇ ಅಂಗಡಿಮುಂಗಟ್ಟುಗಳಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಜನ ಮುಗಿಬಿದ್ದ ವಾತಾವರಣವಿತ್ತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ