ಸಹಜ ಸ್ಥಿತಿಯತ್ತ ಬೆಂಗಳೂರು

ಬುಧವಾರ, 14 ಸೆಪ್ಟಂಬರ್ 2016 (09:14 IST)
ಕಾವೇರಿ ಗಲಭೆ ಹಿನ್ನೆಲೆಯಲ್ಲಿ ಅಶಾಂತಿಯ ಗೂಡಾಗಿದ್ದ ಬೆಂಗಳೂರು ನಗರ ಸಹಜ ಸ್ಥಿತಿಯತ್ತ ಮರಳುತ್ತಿದೆ. ಆದರೂ ಮುಂಜಾಗ್ರತಾ ಕ್ರಮವಾಗಿ 16 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕರ್ಪ್ಯೂವನ್ನು ಮುಂದುವರಿಸಲಾಗಿದ್ದು ಬಿಗಿ ಬಂದೋಬಸ್ತ ಕೈಗೊಳ್ಳಲಾಗಿದೆ. 
ಕರ್ಪ್ಯೂವನ್ನು ಮುಂದುವರೆದಿದ್ದರೂ ಸಹ ಶಾಲಾಕಾಲೇಜುಗಳಿಗೆ ರಜೆಯನ್ನು ನೀಡಲಾಗಿಲ್ಲ. ಸಾರ್ವಜನಿಕ ಸಾರಿಗೆ, ಬಸ್ ಸಂಚಾರ, ಆಟೋ ಸಂಚಾರ ಎಂದಿನಂತೆ ಇದೆ. ಮಂಗಳವಾರದಿಂದಲೇ ಮೆಟ್ರೋ ಸಂಚಾರ ಆರಂಭವಾಗಿದೆ. 
 
ಜನರು ಕೂಡ ತಮ್ಮ ತಮ್ಮ ವಾಹನಗಳಲ್ಲಿ ಬಂದು ಹಾಲು-ತರಕಾರಿ ಕೊಂಡುಕೊಳ್ಳುತ್ತಿದ್ದಾರೆ. ಆದರೆ ಕರ್ಫ್ಯೂವಿನಿಂದಾಗಿ ಅಂಗಡಿ ಮುಂಗಟ್ಟುಗಳು ತೆರೆದಿಲ್ಲ.
 
ಈಗಾಗಲೇ ಮೆಜೆಸ್ಟಿಕ್‌ನಲ್ಲಿ ಬಸ್ ಸಂಚಾರ ಆರಂಭವಾಗಿದೆ. ಹೊತ್ತಿ ಉರಿದ ಹೆಗ್ಗನಹಳ್ಳಿಯಲ್ಲಿ ಜನಜೀವನ ಸಹಜ ಸ್ಥಿತಿಯತ್ತ ಸಾಗುತ್ತಿದೆ.
 
ನಗರದಲ್ಲಿ ಬೀಡುಬಿಟ್ಟಿರುವ ಅರೆಸೇನಾ ಪಡೆಗಳು ಬೆಳ್ಳಂಬೆಳಿಗ್ಗೆ ಪಥ ಸಂಚಲನ ನಡೆಸಿ ಸಾರ್ವಜನಿಕರಲ್ಲಿರುವ ಆತಂಕವನ್ನು ದೂರ ಮಾಡುವ ಪ್ರಯತ್ನ ಮಾಡಿದ್ದಾರೆ.
 
ಮಾಲ್, ಚಿತ್ರಮಂದಿರಗಳು, ಮೆಡಿಕಲ್ ಶಾಪ್‌ಗಳು ಎಂದಿನಂತೆ ಕಾರ್ಯಾರಂಭ ಮಾಡಿವೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ