Bannerghatta, ಸಫಾರಿ ವೇಳೆಯೇ ಪ್ರವಾಸಿಗನಿಗೆ ಹೃದಯಾಘಾತ

Sampriya

ಭಾನುವಾರ, 28 ಸೆಪ್ಟಂಬರ್ 2025 (14:13 IST)
ಆನೇಕಲ್: ಇಲ್ಲಿನ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಸಫಾರಿಗೆ ತೆರಳಿದ್ದ ಪ್ರವಾಸಿಗ ಹೃದಯಾಘಾತಕ್ಕೆ ಬಲಿಯಾದ ಘಟನೆ ನಡೆದಿದೆ. 

ಮೃತರನ್ನು ಬೆಂಗಳೂರಿನ ನಾಗರಬಾವಿಯ ನಿವಾಸಿ ನಂಜಪ್ಪ (45) ಎಂದು ಗುರುತಿಸಲಾಗಿದೆ. 

 ಪತ್ನಿ ಇಬ್ಬರು ಮಕ್ಕಳೊಂದಿಗೆ ಸಫಾರಿ ವೀಕ್ಷಣೆ ಬಂದಿದ್ದ ವೇಳೆ ನಂಜಪ್ಪ ಸಫಾರಿ ಬಸ್ಸಿನಲ್ಲಿಯೇ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ.


ಝೂ ಅಂಬುಲೆನ್ಸ್ ಮೂಲಕ ನಂಜಪ್ಪರನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಂಜಪ್ಪ ಮೃತಪಟ್ಟಿದ್ದಾರೆ. ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ