Bantwal murder: ಅಬ್ದುಲ್ ರಹಿಮಾನ್ ಮರ್ಡರ್: ಯಾರನ್ನೂ ಸುಮ್ನೇ ಬಿಡಲ್ಲ ಎಂದು ಗುಡುಗಿದ ಸಿದ್ದರಾಮಯ್ಯ

Krishnaveni K

ಬುಧವಾರ, 28 ಮೇ 2025 (10:38 IST)
ಬಂಟ್ವಾಳ: ತಾಲೂಕಿನ ಅಬ್ದುಲ್ ರಹಿಮಾನ್ ಎಂಬಾತನನ್ನು ಭೀಕರವಾಗಿ ಕೊಚ್ಚಿ ಕೊಲೆ ಮಾಡಿದ ಪ್ರಕರಣದ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು ಯಾರನ್ನೂ ಸುಮ್ನನೇ ಬಿಡಲ್ಲ ಎಂದಿದ್ದಾರೆ.

ಮೊನ್ನೆಯಷ್ಟೇ ಮಂಗೂರಿನಲ್ಲಿ ಸುಹಾಸ್ ಶೆಟ್ಟಿ ಎಂಬ ಹಿಂದೂ ಕಾರ್ಯಕರ್ತನನ್ನು ಕೆಲವು ಮುಸ್ಲಿಂ ಯುವಕರ ಗುಂಪು ಕೊಚ್ಚಿ ಕೊಲೆ ಮಾಡಿತ್ತು. ಈ ಘಟನೆ ಬಳಿಕ ಮಂಗಳೂರು ಬೂದಿ ಮುಚ್ಚಿದ ಕೆಂಡದಂತಿತ್ತು. ಇದೀಗ ದಕ್ಷಿಣ ಕನ್ನಡದಲ್ಲಿ ಮತ್ತೊಮ್ಮೆ ತಲ್ವಾರ್ ಸದ್ದು ಮಾಡಿದೆ.

ಪಿಕ್ ಅಪ್ ವಾಹನ ಚಾಲಕನಾಗಿದ್ದ ಅಬ್ದುಲ್ ರಹಿಮಾನ್ ಎಂಬಾತನನ್ನು ಇಬ್ಬರು ಆಗಂತುಕರು ಬೈಕ್ ನಲ್ಲಿ ಬಂದು ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಘಟನೆ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ‘ದಕ್ಷಿಣ ಕನ್ನಡದಲ್ಲಿ ಯುವಕನೊಬ್ಬನ ಹತ್ಯೆಯಾಗಿದ್ದು, ಕೂಡಲೇ ಆರೋಪಿಗಳನ್ನು ಬಂಧಿಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ. ತಪ್ಪಿತಸ್ಥರು ಯಾರೇ ಆಗಿದ್ದರೂ ಬಿಡುವ ಪ್ರಶ್ನೆಯೇ ಇಲ್ಲ’ ಎಂದು ಸಿಎಂ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ