ತುಮಕೂರು : ಪ್ರಸವ ವೇಳೆ ಅನಾಥ ಬಾಣಂತಿ ಹಾಗೂ ಅವಳಿ ಶಿಶುಗಳು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ತುಮಕೂರಿನಲ್ಲಿ ನಡೆದಿದೆ.
ಬಾಣಂತಿ ಹಾಗೂ ಅವಳಿ ಮಕ್ಕಳ ಸಾವಿಗೆ ಜಿಲ್ಲಾಸ್ಪತ್ರೆಯ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಲಾಗಿದೆ.
ಭಾರತೀನಗರದ ಅಭಯ ಆಂಜನೇಯ ದೇವಸ್ಥಾನದ ಬಳಿ ವಾಸವಿದ್ದ ತುಂಬು ಗರ್ಭಿಣಿ ಕಸ್ತೂರಿ (30) ಬುಧವಾರ ಹೆರಿಗೆಗೆಂದು ಜಿಲ್ಲಾಸ್ಪತ್ರೆಗೆ ತೆರಳಿದ್ದರು.
ಆದರೆ ತಾಯಿಗೆ ಆಧಾರ್ ಕಾರ್ಡ್ ಇಲ್ಲದ ಕಾರಣಕ್ಕೆ ಕಸ್ತೂರಿಯವರನ್ನು ವೈದ್ಯಕೀಯ ಸಿಬ್ಬಂದಿ ಆಸ್ಪತ್ರೆಗೆ ದಾಖಲಿಸಿಕೊಳ್ಳದೇ, ವಾಪಸ್ ಕಳುಹಿಸಿದ್ದಾರೆ.
ಇಂದು ಬೆಳಗ್ಗೆ ಕಸ್ತೂರಿಗೆ ಮನೆಯಲ್ಲಿಯೇ ಹೆರಿಗೆ ಆಗಿದೆ. ಆದರೆ ಸೂಕ್ತ ಚಿಕಿತ್ಸೆ ಸಿಗದೇ ಅವಳಿ ಶಿಶುಗಳ ಜೊತೆಗೆ ಬಾಣಂತಿಯೂ ಮೃತಪಟ್ಟಿದ್ದಾರೆ. ಕಸ್ತೂರಿ ಮೂಲತಃ ತಮಿಳುನಾಡಿನವರಾಗಿದ್ದು, ಕಳೆದ 1 ತಿಂಗಳಿನಿಂದ ಭಾರತಿ ನಗರದಲ್ಲಿ ವಾಸವಿದ್ದರು ಎನ್ನಲಾಗಿದೆ.