ವಾಯುಭಾರ ಕುಸಿತ: ಮುಂದಿನ 5 ದಿನ ರಾಜ್ಯದಲ್ಲಿ ಮಳೆ ಸಾಧ್ಯತೆ

Sampriya

ಸೋಮವಾರ, 23 ಡಿಸೆಂಬರ್ 2024 (19:42 IST)
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ ಮುಂದಿನ 5 ದಿನ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸಿಲಿಕಾನ್ ಸಿಟಿ ಸೇರಿದಂತೆ  ರಾಜ್ಯದ ಹಲವೆಡೆ ಸೋಮವಾರ ಮೋಡ ಕವಿದ ವಾತಾವರಣ ಕಾಣಿಸಿಕೊಂಡಿತು. ಕೆಲವೆಡೆ ಹಗುರದಿಂದ ಕೂಡಿದ ಸಾಧಾರಣ ಪ್ರಮಾಣದಲ್ಲಿ ವರ್ಷಧಾರೆಯಾಗಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯ ಕೆಲ ಪ್ರದೇಶಗಳಲ್ಲಿ ಡಿ.24ರಿಂದ ಡಿ.28ರವರೆಗೆ ಸಾಧಾರಣ ಮಳೆಯಾಗಲಿದೆ. ಬೆಂಗಳೂರು, ಬೆಂ.ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಕೋಲಾರ, ತುಮಕೂರು, ದಾವಣಗೆರೆ, ಚಿತ್ರದುರ್ಗ, ವಿಜಯನಗರ ಮತ್ತು ಬಳ್ಳಾರಿಯಲ್ಲಿ ಡಿ.27 ಮತ್ತು ಡಿ.28ರಂದು ಬಿರುಸಾಗಿ ಮಳೆಯಾಗಲಿದೆ.

ಆದರೆ, ದಕ್ಷಿಣ ಕರ್ನಾಟಕ ವ್ಯಾಪ್ತಿಯ ಕೆಲ ಜಿಲ್ಲೆಗಳಲ್ಲಿ ಡಿ.24ರಿಂದ ಡಿ.26ರವರೆಗೆ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ.

ಬಾಗಲಕೋಟೆ, ಬೆಳಗಾವಿ, ಬೀದರ್​, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಸೇರಿ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಡಿ.27ರಂದು ಜೋರಾಗಿ ವರ್ಷಧಾರೆಯಾಗಲಿದೆ. ಡಿ.24ರಿಂದ ಡಿ.26ರವರೆಗೆ ಉತ್ತರ ಕರ್ನಾಟಕದ ಭಾಗದ ಕೆಲವಡೆ ತುಂತುರು ಮಳೆ ಬೀಳಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ