ದಿನೇಶ್ ಗುಂಡೂರಾವ್ ಮನೆಯಲ್ಲೇ ಅರ್ಧ ಪಾಕಿಸ್ತಾನವಿದೆ ಎಂದ ಬಸನಗೌಡ ಪಾಟೀಲ್
ಈ ಬಗ್ಗೆ ವಿಜಯಪುರದ ಬಿಜೆಪಿ ಕಚೇರಿ ಬಳಿ ಪ್ರತಿಕ್ರಿಯಿಸಿದ ಬಸವನಗೌಡ ಪಾಟೀಲ್ ಅವರು, ನಮ್ಮ ಪದಾಧಿಕಾರಿ ಮೊಬೈಲ್ ಸಿಮ್ ವ್ಯಾಪಾರಿಗಳಿದ್ದಾರೆ. ಅವರ ಬಳಿ ಯಾರು ಬಂದಿರುತ್ತಾರೆ ಏನು ಗೊತ್ತಾಗುತ್ತದೆ. ಬಿಜೆಪಿ, ಕಾಂಗ್ರೆಸ್ ಇರಲಿ, ಯಾರೇ ಇರಲಿ ತನಿಖೆಗೆ ಸಹಕಾರ ನೀಡೋದಾಗಿ ಹೇಳಿದ್ದಾನೆ ಎಂದು ಹೇಳಿದರು.
ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಸಾಕ್ಷಿ ವಿಚಾರಣೆ ಸಲುವಾಗಿ ಬಿಜೆಪಿ ಮುಖಂಡನನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಇದರ ಬಗ್ಗೆ ಬಿಜೆಪಿ ಮೇಲೆ ಕಾಂಗ್ರೆಸ್ ಗಂಭೀರ ಆರೋಪ ಮಾಡಿತ್ತು. ಸಚಿವ ದಿನೇಶ್ ಗುಂಡೂರಾವ್ ಅವರು ಬಿಜೆಪಿ ನಾಯಕನ ಬಂಧನದ ಮೂಲಕ ಇದರಲ್ಲಿ ಕೇಸರಿ ಪಡೆ ಶಾಮೀಲಾಗಿರುವುದು ಗೊತ್ತಾಗುತ್ತದೆ ಎಂದು ಗಂಭೀರ ಆರೋಪ ಮಾಡಿದ್ದರು.