ರಾಜ್ಯದ ಸಿಎಂ ಇವರೇ ಆಗೋದು ಎಂದು ಭವಿಷ್ಯ ನುಡಿದ ಬಸನಗೌಡ ಪಾಟೀಲ ಯತ್ನಾಳ

Sampriya

ಬುಧವಾರ, 29 ಅಕ್ಟೋಬರ್ 2025 (18:37 IST)
Photo Credit X
ಬೆಳಗಾವಿ: ಮುಖ್ಯಮಂತ್ರಿ ಹುದ್ದೆಗಾಗಿ ಲಾಬಿ ಮಾಡುವವರಿಗೆ ಸಿಎಂ ಸ್ಥಾನ ಸಿಗುವುದಿಲ್ಲ. ಈ ಸ್ಥಾನವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಲಂಕರಿಸಲಿದ್ದಾರೆಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಭವಿಷ್ಯ ನುಡಿದಿದ್ದಾರೆ. 

ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ಸಿಎಂ ಕುರ್ಚಿ ವಿಚಾರ ಸಂಬಂಧ ಅವರು ಬೆಳಗಾವಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಹುದ್ದೆಗಾಗಿ ಜಟಾಪಟಿ ಆರಂಭವಾಗಿದ್ದು, ಪ್ರತಿ ಆಕಾಂಕ್ಷಿ ಲಾಬಿ ನಡೆಸುತ್ತಿದ್ದಾರೆ. ಇನ್ನೂ ತಮ್ಮ ಬೆಂಬಲಿಗರ ಪರವಾಗಿ ಶಾಸಕರು ಧ್ವನಿ ಎತ್ತುತ್ತಿದ್ದು, ಇದರಲ್ಲಿ ಮಲ್ಲಿಕಾರ್ಜುನ ಖರ್ಗೆ ಚಿತ್ರದಲ್ಲಿ ಕಾಣಿಸುತ್ತಿಲ್ಲ. ಆದರೆ, ರಾಜ್ಯದ ಸಾರಥ್ಯ ಡಾರ್ಕ್‌ಹಾರ್ಸ್‌ಗೆ ಸಿಗಲಿದೆ ಎಂದರು.

ಎಐಸಿಸಿ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರು ಕರ್ನಾಟಕ ಮುಖ್ಯಮಂತ್ರಿ ಆಗಬೇಕೆಂದು ಕಾಯುತ್ತಿದ್ದಾರೆ. ಖರ್ಗೆ ಹೆಸರು ಬಂದಾಗ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರರು ಸ್ಪರ್ಧೆಯಿಂದ ಹೊರಗುಳಿಯುತ್ತಾರೆ ಎಂದು ಹೇಳಿದರು. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ