Basanagouda Patil Yatnal: ಆರ್ ವರ್ಷಕ್ಕೆ ಬಿಜೆಪಿಯಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆ

Krishnaveni K

ಬುಧವಾರ, 26 ಮಾರ್ಚ್ 2025 (17:32 IST)
ಬೆಂಗಳೂರು: ಬಿವೈ ವಿಜಯೇಂದ್ರ ವಿರುದ್ಧ ಕಿಡಿ ಕಾರುತ್ತಿದ್ದ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರನ್ನು ಆರು ವರ್ಷಕ್ಕೆ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.

ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಈ ಆದೇಶ ಹೊರಡಿಸಿದೆ. ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರಗೆ ಸೆಡ್ಡು ಹೊಡೆದಿದ್ದ ಯತ್ನಾಳ್ ಸದಾ ಬಹಿರಂಗ ಹೇಳಿಕೆಗಳ ಮೂಲಕ ಪಕ್ಷಕ್ಕೆ ಮುಜುಗುರವುಂಟು ಮಾಡುತ್ತಿದ್ದರು. ಈಗಾಗಲೇ ಹಲವು ಬಾರಿ ಹೈಕಮಾಂಡ್ ಯತ್ನಾಳ್ ಗೆ ಎಚ್ಚರಿಕೆ ನೀಡಿತ್ತು.

ಹಾಗಿದ್ದರೂ ಪಕ್ಷದಲ್ಲಿನ ಗುಂಪುಗಾರಿಕೆ ಮುಂದುವರಿದಿತ್ತು. ಯತ್ನಾಳ್ ಬಣ ಪದೇ ಪದೇ ಪ್ರತ್ಯೇಕ ಸಭೆ ಮಾಡುವ ಬಗ್ಗೆ ಎಷ್ಟೇ ಎಚ್ಚರಿಕೆ ನೀಡಿದರೂ ಕ್ಯಾರೇ ಎನ್ನುತ್ತಿರಲಿಲ್ಲ. ಇದೀಗ ಕಟ್ಟಾ ಹಿಂದುತ್ವ ನಾಯಕ ಯತ್ನಾಳ್ ರನ್ನು ಪಕ್ಷದಿಂದಲೇ ಉಚ್ಛಾಟಿಸಲಾಗಿದೆ.

ಇದೀಗ ಯತ್ನಾಳ್ ಮತ್ತು ಬಣದ ಮುಂದಿನ ನಡೆಯೇನು ಎಂಬ ಬಗ್ಗೆ ಎಲ್ಲರ ಕುತೂಹಲವಿದೆ. ಈಗಾಗಲೇ ಹಿರಿಯ ನಾಯಕ ಕೆಎಸ್ ಈಶ್ವರಪ್ಪನವರನ್ನೂ ಪಕ್ಷದಿಂದ ಅಮಾನತು ಮಾಡಲಾಗಿತ್ತು. ಈಗ ಯಡಿಯೂರಪ್ಪ ಬಣದ ವಿರುದ್ಧ ಕಿಡಿ ಕಾರಿದ ಯತ್ನಾಳ್ ರನ್ನೂ ಪಕ್ಷದಿಂದ ಉಚ್ಛಾಟಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ