ಅನುಮತಿ ಇಲ್ಲದೇ ನಡೆಯುವ ನಮಾಜ್ ನಿಷೇಧಿಸಿ: ಸಿಎಂಗೆ ಪತ್ರ ಬರೆದ ಬಸನಗೌಡ ಪಾಟೀಲ್ ಯತ್ನಾಳ್

Krishnaveni K

ಶುಕ್ರವಾರ, 17 ಅಕ್ಟೋಬರ್ 2025 (16:34 IST)
ಬೆಂಗಳೂರು: ಆರ್ ಎಸ್ಎಸ್ ಸಂಘಟನೆಗೆ ನಿರ್ಬಂಧ ವಿಧಿಸಿರುವ ಬೆನ್ನಲ್ಲೇ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಈಗ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದು ಅನುಮತಿ ಇಲ್ಲದೇ ನಡೆಯುವ ನಮಾಜ್ ನಿಷೇಧಿಸುವಂತೆ ಆಗ್ರಹಿಸಿದ್ದಾರೆ.

ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಸಂಪುಟ ಸಭೆಯಲ್ಲೇ ಆರ್ ಎಸ್ಎಸ್ ಚಟವಟಿಕೆಗಳಿಗೆ ನಿರ್ಬಂಧ ವಿಧಿಸುವ ನಿರ್ಧಾರ ತೆಗೆದುಕೊಂಡಿದ್ದಾರೆ. ಇದಕ್ಕೀಗ ಕೌಂಟರ್ ಎನ್ನುವಂತೆ ಯತ್ನಾಳ್ ನಮಾಜ್ ಗೂ ನಿಷೇಧ ಹೇರುವಂತೆ ಪತ್ರ ಬರೆದಿದ್ದಾರೆ.

‘ಸರ್ಕಾರವೇ ಪರಿಚಯಿಸಿರುವ ನಿಯಮಾವಳಿಗಳ ಅನುಸಾರ ಸಾರ್ವಜನಿಕ ಸ್ಥಳಗಳಲ್ಲಿ, ಸರ್ಕಾರಿ ಜಾಗಗಳಲ್ಲಿ ನಮಾಜ್ ಮಾಡಲು ಅವಕಾಶ ಕೊಡಬಾರದೆಂದು ಮಾನ್ಯ ಮುಖ್ಯ ಮಂತ್ರಿಗಳಿಗೆ ಸವಿವರವಾಗಿ ಪತ್ರ ಬರೆದಿದ್ದೇನೆ. ಸ 'ಸರ್ವ ಜನಾಂಗದ ಶಾಂತಿಯ ತೋಟ' ಎಂಬ ಸರ್ಕಾರದ ಆಶಯ ಎಲ್ಲರಿಗೂ ಅನ್ವಯ ಆಗಬೇಕು. ಸರ್ಕಾರ ಕೂಡಲೇ ಅಗತ್ಯ ಕ್ರಮ ಕೈಗೊಳ್ಳಲಿ’ ಎಂದು ಅವರು ಆಗ್ರಹಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ