ಮುಸ್ಲಿಂ ಕೋಟಾ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಸುಳ್ಳು ಹೇಳುತ್ತಿದ್ದಾರೆ: ಬಸವರಾಜ ಬೊಮ್ಮಾಯಿ

Krishnaveni K

ಶನಿವಾರ, 27 ಏಪ್ರಿಲ್ 2024 (11:38 IST)
ಬೆಂಗಳೂರು: ಮುಸ್ಲಿಮರಿಗೆ ಹಿಂದುಳಿದ ವರ್ಗದ ಸ್ಥಾನ ಮಾನ ನೀಡುವ ವಿಚಾರ ಸದ್ಯಕ್ಕೆ ಸುಪ್ರೀಂಕೋರ್ಟ್ ನಲ್ಲಿದೆ. ಹಾಗಿದ್ದರೂ ಸಿಎಂ ಸಿದ್ದರಾಮಯ್ಯ ಸುಳ್ಳು ಹೇಳುತ್ತಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಇತ್ತೀಚೆಗೆ ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರಿಗೆ ಹಿಂದುಳಿದ ವರ್ಗದ ಸ್ಥಾನಮಾನ ನೀಡಿದ ವಿಚಾರವಾಗಿ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿತ್ತು. ಧರ್ಮದ ಆಧಾರದಲ್ಲಿ ಯಾರಿಗೂ ಹಿಂದುಳಿದ ಸ್ಥಾನ ಮಾನ ನೀಡಬಾರದು ಎಂದು ಕೋರ್ಟ್ ಸರ್ಕಾರಕ್ಕೆ ಛಾಟಿ ಬೀಸಿತ್ತು.

ಇದರ ಬಗ್ಗೆ ಮಾಧ‍್ಯಮಗಳು ಪ್ರಶ್ನಿಸಿದಾಗ ಈ ನಿರ್ಧಾರ ಬೊಮ್ಮಾಯಿ ಸರ್ಕಾರದ ಅವಧಿಯಲ್ಲೇ ನಡೆದಿತ್ತು ಎಂದು ಸಿದ್ದರಾಮಯ್ಯ ಸಮಜಾಯಿಷಿ ನೀಡಿದ್ದರು. ಇದಕ್ಕೀಗ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಈ ವಿಚಾರ ಈಗಲೂ ಸುಪ್ರೀಂ ಕೋರ್ಟ್ ನಲ್ಲಿದೆ. ಇದರ ಬಗ್ಗೆ ತೀರ್ಪು ಬರುವವರೆಗೆ ನಾವು ಯಾವುದೇ ತೀರ್ಮಾನ ಕೈಗೊಳ್ಳುವುದಿಲ್ಲ ಎಂದು ನಿರ್ಧರಿಸಿದ್ದೆವು.

ವಿವಾದ ಇತ್ಯರ್ಥವಾಗುವವರೆಗೂ ಮುಸ್ಲಿಂ ಕೋಟಾವನ್ನು ರದ್ದುಗೊಳಿಸುವ ಅಥವಾ ಜಾರಿಗೊಳಿಸುವ ಬಗ್ಗೆ ತೀರ್ಮಾನ ಕೈಗೊಳ್ಳುವುದು ಬೇಡ ಎಂದು ನಿರ್ಧರಿಸಿದ್ದೆವು. ನಮ್ಮ ನಿಲುವು ಅದಕ್ಕೆ ಬದ್ಧವಾಗಿಯೇ ಇದೆ. ಆಗ ಪ್ರತಿಪಕ್ಷವಾಗಿದ್ದ ಕಾಂಗ್ರೆಸ್ ನಮ್ಮ ನಿರ್ಧಾರವನ್ನು ವಿರೋಧಿಸಿತ್ತು ಎಂದು ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ