ಹುಬ್ಬಳ್ಳಿಯಲ್ಲಿ ಬಸವೇಶ್ವರ ಪುತ್ಥಳಿ ತೆರವು
ಹುಬ್ಬಳ್ಳಿಯಲ್ಲಿ ಸಾಕಷ್ಟು ವಿರೋಧಗಳ ನಡುವೆಯೂ ಫ್ಲೈಓವರ್ ನಿರ್ಮಾಣಕ್ಕಾಗಿ ರಾತ್ರೋರಾತ್ರಿ ಬಸವೇಶ್ವರ ಪುತ್ಥಳಿ ತೆರವು ಮಾಡಲಾಗಿದೆ. ನಗರದಲ್ಲಿ ಸುಗಮ ಸಂಚಾರಕ್ಕಾಗಿ ಹಲವು ಕಡೆ ಫ್ಲೈಓವರ್ ನಿರ್ಮಾಣ ಮಾಡಲಾಗುತ್ತಿದ್ದು, ಇದರಲ್ಲಿ ಒಂದು ಫ್ಲೈಓವರ್ ಬಸವನದಲ್ಲಿರುವ ಬಸವೇಶ್ವರರ ಪುತ್ಥಳಿ ಮೇಲೆ ಹಾದುಹೋಗಲಿದೆ. ಆದರೆ ಇದಕ್ಕೆ ಲಿಂಗಾಯತ ಸಮುದಾಯದಿಂದ ತೀವ್ರ ವಿರೋಧವಿದೆ. ಹೀಗಾಗಿ ವಾಣಿಜ್ಯ ನಗರಿ ಹುಬ್ಬಳ್ಳಿಯ ಮಹತ್ವದ ಯೋಜನೆಯಲ್ಲಿ ಒಂದಾಗಿರುವ ಫ್ಲೈ ಓವರ್ ಈಗಾಗಲೇ ಜಿಲ್ಲಾಡಳಿತ, ಮಹಾನಗರ ಪಾಲಿಕೆ ವತಿಯಿಂದ ಸಾಕಷ್ಟು ಬಾರಿ ಲಿಂಗಾಯತ ಮುಖಂಡರ ಜೊತೆಗೆ ಸಭೆ ನಡೆಸಲಾಗಿತ್ತು. ಸಭೆಗಳಲ್ಲಿ ಸಾಕಷ್ಟು ವಿರೋಧಗಳು ವ್ಯಕ್ತವಾಗಿದ್ದವು. ಜೊತೆಗೆ ಒಮ್ಮತವು ಬಂದಿರಲಿಲ್ಲ. ಹೀಗಾಗಿ ಪುತ್ಥಳಿ ತೆರವು ಕಾರ್ಯವನ್ನು ಇಷ್ಟು ದಿನ ನಿಲ್ಲಿಸಲಾಗಿತ್ತು. ಆದರೆ ಸೋಮವಾರ ತಡರಾತ್ರಿ ಏಕಾಏಕಿ ತಾಂತ್ರಿಕ ಉಪಕರಣಗಳ ಮೂಲಕ ಬಸವೇಶ್ವರರ ಮೂರ್ತಿಯನ್ನು ತೆರವು ಮಾಡಲಾಗಿದೆ.