ವೀರಶೈವ ಸ್ವಾಮಿಜಿಗಳನ್ನು ತರಾಟೆಗೆ ತೆಗೆದುಕೊಂಡ ಹೊರಟ್ಟಿ

ಮಂಗಳವಾರ, 27 ಮಾರ್ಚ್ 2018 (17:18 IST)
ರಾಜಕಾರಣಿಗಳಿಗಿಂತ ವೀರಶೈವ ಸ್ವಾಮಿಜಿಗಳಿಗೆ ಜಾಸ್ತಿ ರಾಜಕೀಯ ತಲೆ ಕೆಟ್ಟಿದೆ. ವಿಜಯಪೂರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ವಾಮಿಜಿಗಳು ಬಿಜೆಪಿಗೆ ಮತ ನೀಡಿ ಎಂದು ಹೇಳುತ್ತಿರುವುದಕ್ಕೆ ವಿಧಾನ ಪರಿಷತ್ ಸದಸ್ಯ ಹಾಗೂ ಜಾಗತಿಕ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಬಸವರಾಜ ಹೊರಟ್ಟಿ ವಿಷಾದ ವ್ಯಕ್ತಪಡಿಸಿದರು.
ಅವರು ನಗರದ ಎಸ್.ಜಿ.ಬಾಳೇಕುಂದ್ರಿ ಸಭಾ ಭವನದಲ್ಲಿ ನಡೆದ ಜಾಗತಿಕ ಲಿಂಗಾಯತ ಮಹಾಸಭೆಯ ಹಾಗೂ ರಾಷ್ಟ್ರೀಯ ಬಸವ ಸೇನೆಯ ಪದಾಧಿಕಾರಿಗಳ ಆಯ್ಕೆಯ ಸಭೆಯಲ್ಲಿ ಮಾತನಾಡಿದರು.
 
ರಾಜ್ಯ ಸರಕಾರ ಲಿಂಗಾಯತ ಪ್ರತ್ಯೇಕ ಧರ್ಮ ಘೋಷಿಸುವಂತೆ ಕೇಂದ್ರಕ್ಕೆ ಶಿಫಾರಸು ಮಾಡಿದೆ. ಆದರೆ ನಾವು ಪ್ರತ್ಯೇಕ ಧರ್ಮ ಘೋಷಣೆ ಮಾಡಲು ಬಿಡುವುದಿಲ್ಲ ಎಂದು ಬಿಜೆಪಿ ಈಶ್ವರಪ್ಪ ಹೇಳಿಕೆ ನೀಡುತ್ತಿದ್ದಾರೆ.  ಬಿಜೆಪಿ ಹಾಗೂ ಈಶ್ವರಪ್ಪ ಲಿಂಗಾಯತ ಧರ್ಮದ ಮಧ್ಯೆ ಕೈ ಹಾಕಲು ಯಾರೂ ಎಂದ ಪ್ರಶ್ನಿಸಿದ ಅವರು, ಕೇಂದ್ರ ಸರಕಾರ ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಮಾನ್ಯತೆ ನೀಡದೆ ಹೋದರೆ ಸುಪ್ರೀಂ ಕೋರ್ಟ್‍ನಿಂದ ಘೋಷಿಸಲು ಕಾನೂನು ಹೋರಾಟ ನಡೆಸುವುದಾಗಿ ತಿಳಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ