ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಆಸ್ಪತ್ರೆಗೆ ದಾಖಲು
ಜ್ವರದಿಂದ ಬಳಲುತ್ತಿದ್ದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಬೆಂಗಳೂರಿನ ಕನ್ನಿಂಗ್ಹ್ಯಾಂ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ತುಷಾರ್ ಗಿರಿನಾಥ್ ಅವರು ಸಣ್ಣ ಪ್ರಮಾಣದ ಜ್ವರದಿಂದ ಬಳಲುತ್ತಿದ್ದರು. ಇದರ ಜೊತೆಗೆ ಕಳೆದ ಶನಿವಾರದಿಂದ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಪರಿಶೀಲನೆಗೆ ಒಳಪಡಿಸಿದಾಗ ಯೂರಿನರಿ ಇನ್ಫೆ ಕ್ಷನ್ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಮನೆಯಲ್ಲೇ ಔಷಧ ಹಾಗೂ ಇಂಜೆಕ್ಷನ್ ನೀಡಲಾಗಿತ್ತು. ಆದರೂ ಜ್ವರ ಕ್ಷೀಣಿಸದ ಕಾರಣ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ ಎಂದು ತುಷಾರ್ ಗಿರಿನಾಥ್ ಆಪ್ತರು ಮಾಹಿತಿ ನೀಡಿದ್ದಾರೆ.