ಬಿಬಿಎಂಪಿ ಚೀಫ್ ಇಂಜಿನಿಯರ್ ಪರಿಸ್ಥಿತಿ ಚಿಂತಾಜನಕವಾಗಿದೆ; ತುಷಾರ್ ಗಿರಿನಾಥ್

ಮಂಗಳವಾರ, 29 ಆಗಸ್ಟ್ 2023 (16:00 IST)
ಮಹಾನಗರ ಪಾಲಿಕೆ ಅವರಣದಲ್ಲಿರುವ ಗುಣನಿಯಂತ್ರಣ ಕೇಂದ್ರ ಕಚೇರಿಯ  ಪ್ರಯೋಗಾಲಯದಲ್ಲಿ ನಡೆದ ಅಗ್ನಿ ಅನಾಹುತದಲ್ಲಿ ತೀವ್ರ ಗಾಯಗೊಂಡಿರುವ ಗುಣ ನಿಯಂತ್ರಣ ವಿಭಾಗದ ಮುಖ್ಯ ಅಭಿಯಂತರರಾದ ಶಿವಕುಮಾರ್ ಅವರು ಶೇಷಾದ್ರಿಪುರ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ತಜ್ಞ ವೈದ್ಯರಿಂದ ಉತ್ತಮ ಚಿಕಿತ್ಸೆಯನ್ನು ನೀಡಲಾಗುತ್ತಿದೆ.ಮತ್ತು ಅವರ ಅರೋಗ್ಯವಾಗಿದ್ದಾರೆ. ಆದರೆ, ಕೆಲ ಮಾಧ್ಯಮಗಳು ಮುಖ್ಯ ಅಭಿಯಂತರರಾದ ಶಿವಕುಮಾರ್ ಸಾವನ್ನಪ್ಪಿದ್ದಾರೆ ಎಂದು  ಸುದ್ದಿಯನ್ನು ಪ್ರಸರಮಾಡುತ್ತಿದ್ದಾರೆ. ವೈದ್ಯರು ಅಧಿಕೃತವಾಗಿ ಮಾಹಿತಿ ನೀಡುವವರೆಗೆ ಮತ್ತು ಮೆಡಿಕಲ್ ಬುಲೆಟಿನ್ ನೀಡುವ ವರೆಗೆ ಈ‌ ಕುರಿತು ವದಂತಿಗಳನ್ನು ಪ್ರಸಾರ ಮಾಡದಂತೆ ಮಹಾನಗರ ಪಾಲಿಕೆ ಆಯುಕ್ತ ಹುಷಾರ್ ಗಿರಿನಾಥ ಮನವಿ ಮಾಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ