ಇಂದು ಬೆಳಗ್ಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಗತ್ಯ ಕ್ರಮ ಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.ಮಳೆಯಿಂದ ಜಲಾವೃತಗೊಂಡ ಯಲಹಂಕದ ಕೇಂದ್ರೀಯ ವಿಹಾರದ ಅಪಾರ್ಟ್ ಮೆಂಟ್ ನ ನಿವಾಸಿಗಳನ್ನು ಎನ್ ಡಿಆರ್ ಎಫ್, ಅಗ್ನಿ ಶಾಮಕ ಹಾಗೂ ಬಿಬಿಎಂಪಿ ಸಿಬ್ಬಂದಿಗಳ ತಂಡಗಳು ರಕ್ಷಿಸಿ, ಅವರಿಗೆ ಆಹಾರ ಪದಾರ್ಥಗಳನ್ನು ವಿತರಿಸಿದ್ದು, ಯಾವುದೇ ರೀತಿ ಸಮಸ್ಯೆಗಳು ಆಗದೇ ರೀತಿ ಮುಂಜಾಗ್ರತಾ ಕ್ರಮ ವಹಿಸಲಾಗಿದೆ ಎಂದು ಮುಖ್ಯ ಆಯುಕ್ತರು ತಿಳಿಸಿದ್ದಾರೆ.