ಬಿಬಿಎಂಪಿ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಅರಾಧೆ ನೇತೃತ್ವದ ಹೈಕೋರ್ಟ್ ವಿಭಾಗಿಯ ಪೀಠ ಈ ಕೂಡಲೆ ಸಿಎಜಿ ವರದಿ ಜಾರಿ ಅನುಷ್ಠಾನಕ್ಕೆ ಮೂವರು ಅಧಿಕಾರಿಗಳನ್ನೊಳಗೊಂಡ ಸಮಿತಿ ರಚಿಸುವಂತೆ ಸೂಚನೆ ನೀಡಿದೆ.
ಹೊಸದಾಗಿ ರಚನೆಯಾಗುವ ಸಮಿತಿ ಸಿಎಜಿ ವರದಿಯಲ್ಲಿ ಪ್ರಸ್ತಾಪವಾಗಿರುವ ರಾಜಕಾಲುವೆ ಒತ್ತುವರಿ ತೆರವಿಗೆ ಕ್ರಮ ಕೈಗೊಳ್ಳಬೇಕು ಹಾಗೂ 15 ದಿನಗಳಿಗೊಮ್ಮೆ ವರದಿ ಜಾರಿಯ ವಿವರಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಆದೇಶಿಸಿ ವಿಚಾರಣೆಯನ್ನು ಸೆ.30ಕ್ಕೆ ಮುಂದೂಡಿದೆ.
ಮಳೆಯಿಂದಾಗಿ ಬೆಂಗಳೂರಿನಲ್ಲಿ ಸಂಭವಿಸಿದ್ದ ಪ್ರವಾಹ ಪರಿಸ್ಥಿತಿ ಕುರಿತಂತೆ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಅರಾಧೆ ಹಾಗೂ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ನೇತೃತ್ವದ ವಿಭಾಗೀಯ ಪೀಠ ಈ ಮಹತ್ವದ ಆದೇಶ ಹೊರಡಿಸಿದೆ.