ಬಿ.ಬಿ.ಎಂ.ಪಿ ಪರಿಸರ ಸ್ನೇಹಿ ಗಣೇಶ ..!!!

ಗುರುವಾರ, 1 ಸೆಪ್ಟಂಬರ್ 2022 (16:02 IST)
ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘದ ವತಿಯಿಂದ ಕೇಂದ್ರ ಕಛೇರಿ ಅವರಣದ ನೌಕರರ ಭವನದಲ್ಲಿ ನೈಸರ್ಗಿಕ ಬಣ್ಣದ ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬವನ್ನು ಅಚರಿಸಿದರು. ಗಣೇಶ ಹಬ್ಬದ ಪ್ರಯುಕ್ತ ಮಹಿಳಾ ಅಧಿಕಾರಿ ಮತ್ತು ನೌಕರರಿಗೆ ರಂಗೋಲೆ ಸ್ಪರ್ಧೆ ಮತ್ತು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.
ಆಡಳಿತಾಧಿಕಾರಿ ರಾಕೇಶ್ ಸಿಂಗ್,ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ರವರ ನೇತೃತ್ವದಲ್ಲಿ ಬಿ.ಬಿ.ಎಂ.ಪಿ.ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷರಾದ ಅಮೃತ್ ರಾಜ್ ರವರು ವಿಶೇಷ ಪೂಜೆ ಸಲ್ಲಿಸಿದರು ಗಣೇಶ ಹಬ್ಬಕ್ಕೆ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಅಧ್ಯಕ್ಷರಾದ ಅಮೃತ್ ರಾಜ್ ರವರು ಮಾತನಾಡಿ ಬಿ.ಬಿ.ಎಂ.ಪಿ.ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘ ನೌಕರರ ಹಿತರಕ್ಷಣೆ ಜೊತೆಯಲ್ಲಿ ಸಮಾಜದ ಒಡನಾಡಿಯಾಗಿ ಸಾಮಾಜಿಕ ಸೇವಾ ಕಾರ್ಯಗಳು ಮಾಡುತ್ತಾ ಬಂದಿದೆ.
 
ಕೊರೋನ ಲಾಕ್ ಡೌನ್ ಸಂದರ್ಭದಲ್ಲಿ ದಿನಸಿ ಕಿಟ್ ವಿತರಣೆ, ಕೊಡಗು, ಉತ್ತರ ಕರ್ನಾಟಕ ನೆರೆ ಸಂತ್ರತ್ಥರಿಗೆ ಸಹಾಯಹಸ್ತ ಮತ್ತು ಧರ್ಮಸ್ಥಳ ಮಂಜುನಾಥಸ್ವಾಮಿ ದೇವಾಲಯಕ್ಕೆ ಕುಡಿಯುವ ನೀರಿನ ಸಮಸ್ಯೆ ಉಂಟಾದಾಗ 1ಲಕ್ಷ ಲೀಟರ್ ಕುಡಿಯುವ ನೀಡಿರುವುದು.
 
ಪರಿಸರ ಸ್ನೇಹಿ ಗಣೇಶ ಹಬ್ಬ ಅಚರಿಸಲು ಜನಜಾಗೃತಿ ಅಭಿಯಾನ ಮತ್ತು ಉಚಿತವಾಗಿ ಮಣ್ಣಿನ ಗೌರಿ ಗಣೇಶ ವಿತರಣೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ