ಬೆಂಗಳೂರಿಗೆ ಕಾಯಕಲ್ಪ ನೀಡುವ ಉದ್ದೇಶದಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯ ರಾಜಧಾನಿಗೆ ಮೂಲಸೌಕರ್ಯ, ಹಸಿರು ನಗರಿಗೊಳಿಸಲು ಮತ್ತು ನಾಗರಿಕರ ಅನುಕೂಲಕ್ಕಾಗಿ 8,409 ಕೋಟಿ ರೂ.ಅನುದಾನವನ್ನು ಮೀಸಲಿಟ್ಟಿದ್ದಾರೆ .
2021-22ನೇ ಸಾಲಿನ ಬಜೆಟ್‌ಗೆ ಹೋಲಿಸಿದರೆ ಈ ವರ್ಷ ಒಟ್ಟು ರೂ.614 ಕೋಟಿ ಅನುದಾನವನ್ನು ಹೆಚ್ಚುವರಿಯಾಗಿ ಘೋಷಣೆ ಮಾಡಲಾಗಿದೆ.
ಬಜೆಟ್‌ನಲ್ಲಿ ಬೆಂಗಳೂರಿನ ಅಭಿವೃದ್ಧಿ ಕಾಮಗಾರಿಗಳಿಗೆ ಸರ್ಕಾರ ಒಟ್ಟು ರೂ. 7,795 ಕೋಟಿ ಅನುದಾನ ಬಿಡುಗಡೆ ಮಾಡಿತ್ತು.
ಈ ಬಾರಿಯ ಬಜೆಟ್‌ನಲ್ಲಿ ಕೆಲವು ಘೋಷಣೆಗಳು ಹಿಂದಿನ ಪ್ರಸ್ತಾವನೆಗಳ ವಿಸ್ತರಣೆಗಳಾಗಿರುವುದು ಕಂಡು ಬಂದಿದೆ. ಆದರೆ ಈ ಪ್ರಸ್ತಾವನೆಗಳಿಗೆ ಸರ್ಕಾರ ಗಡುವನ್ನು ನಿಗದಿಪಡಿಸಿದೆ ಎಂದು ತಜ್ಞರು ಮತ್ತು ಅಧಿಕಾರಿಗಳು ಬಜೆಟ್ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.