ಇಂತಹ ಖಾಸಗಿ ಶಾಲಾ ಸಂಸ್ಥೆಗಳಿಗೆ ಬಿಗ್ ಶಾಕ್ ನೀಡಲು ಮುಂದಾದ ಬಿಬಿಎಂಪಿ
ಶುಕ್ರವಾರ, 18 ಅಕ್ಟೋಬರ್ 2019 (08:53 IST)
ಬೆಂಗಳೂರು : ತೆರಿಗೆ ವಿನಾಯಿತಿ ಪಡೆದು ಲಕ್ಷಗಟ್ಟಲೆ ಡೊನೇಷನ್ ಪಡೆಯುತ್ತಿರುವ ಖಾಸಗಿ ಶಾಲಾ ಸಂಸ್ಥೆಗಳಿಗೆ ಬಿಬಿಎಂಪಿ ಬಿಗ್ ಶಾಕ್ ನೀಡಲು ಮುಂದಾಗಿದೆ.
ಕೆಎಂಸಿ ಕಾಯ್ದೆ 110 ಜಿ ಅಡಿ ತೆರಿಗೆ ವಿನಾಯಿತಿ ಪಡೆದಿದ್ದರೂ ಸಹ ಕೆಲವು ಖಾಸಗಿ ಶಾಲೆಗಳು ವಿದ್ಯಾರ್ಥಿಗಳಿಂದ ಲಕ್ಷಗಟ್ಟಲೆ ಡೊನೇಷನ್ ಪಡೆಯುತ್ತಿವೆ. ಇಂತಹ ಖಾಸಗಿ ಶಾಲಾ ಸಂಸ್ಥೆಗಳ ಮಾಹಿತಿ ಬಿಬಿಎಂಪಿಗೆ ಸಿಕ್ಕಿದ್ದು, ಅಂತವರಿಂದ ತೆರಿಗೆ ಸಂಗ್ರಹಿಸಲು ಪಾಲಿಕೆ ನಿರ್ಧರಿಸಿದೆ.
ಇದಕ್ಕೆ ಸಂಬಂಧಪಟ್ಟ ಪ್ರಸ್ತಾವನೆಯನ್ನು ಮೇಯರ್ ಗೌತಮ್ ಕುಮಾರ್ ಜೈನ್ ಕಂದಾಯ ಸಚಿವ ಆರ್.ಅಶೋಕ್ ಅವರ ಮುಂದಿಡಲು ನಿರ್ಧರಿಸಿದ್ದು. ಇದಕ್ಕೆ ಸರ್ಕಾರ ಒಪ್ಪಿಗೆ ನೀಡಿದರೆ ಶಿಕ್ಷಣ ಸಂಸ್ಥೆಗಳಿಗೆತೆರಿಗೆ ವಿಧಿಸಲಾಗುವುದು ಎನ್ನಲಾಗಿದೆ.