ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಆಡಳಿತ ಸ್ಥಾಪಿಸಲು ರಾಜಕೀಯ ಪಕ್ಷಗಳ ಶಾಸಕರು, ಸಂಸದರು ಹಾಗೂ ವಿಧಾನ ಪರಿಷತ್ ಸದಸ್ಯರು ಮತದಾರರ ಪಟ್ಟಿಯಲ್ಲಿ ಅಕ್ರಮವಾಗಿ ಹೆಸರು ಸೇರ್ಪಡೆ ಮಾಡುತ್ತಿದ್ದಾರೆ ಎನ್ನು ವ ಆರೋಪಗಳು ಕೇಳಿ ಬಂದಿವೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಚುನಾವಣೆಯ ಮತದಾರರ ಪಟ್ಟಿಯನ್ನು ಪ್ರಾದೇಶಿಕ ಆಯುಕ್ತರಿಗೆ ಸಲ್ಲಿಸಿಲ್ಲ ಎಂದು ಹೇಳಲಾಗುತ್ತಿದೆ.
ಬಿಜೆಪಿ ಆರೋಪವನ್ನು ತಳ್ಳಿಹಾಕಿದ ಕಾಂಗ್ರೆಸ್ ಹಿರಿಯ ಮುಖಂಡ ಸಚಿವ ರಾಮಲಿಂಗಾರೆಡ್ಡಿ, ಶಾಸಕರಾದ ಉಗ್ರಪ್ಪ ಸೇರಿದಂತೆ ಕೆಲವು ಶಾಸಕರು 30 ವರ್ಷಗಳಿಗಿಂತ ಹೆಚ್ಚು ಬೆಂಗಳೂರಿನಲ್ಲಿ ನೆಲೆಸಿದ್ದರಿಂದ ಅವರ ಹೆಸರುಗಳನ್ನು ಮತದಾರರ ಪಟ್ಟಿಯಲ್ಲಿ ಸೇರಿಸಲು ಶಿಫಾರಸ್ಸು ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.