ಬಿಬಿಎಂಪಿ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಣಕ್ಕೆ: ಪದ್ಮನಾಭ ರೆಡ್ಡಿ

ಸೋಮವಾರ, 26 ಸೆಪ್ಟಂಬರ್ 2016 (16:17 IST)
ಬಿಬಿಎಪಿಯಲ್ಲಿ ಕೇವಲ 75 ಕಾರ್ಪೊರೇಟರ್‌ಗಳನ್ನು ಹೊಂದಿರುವ ಕಾಂಗ್ರೆಸ್ ಪಕ್ಷವೇ ಮೇಯರ್ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದೆ. ನಾವು 101 ಕಾರ್ಪೊರೇಟರ್‌ಗಳನ್ನು ಹೊಂದಿ ನಾವೇಕೆ ಮೇಯರ್ ಚುನಾವಣೆಯಲ್ಲಿ ಸ್ಪರ್ಧಿಸಬಾರದು ಎಂದು ಬಿಬಿಎಂಪಿ ವಿಪಕ್ಷ ನಾಯಕ  ಪದ್ಮನಾಭರೆಡ್ಡಿ ಪ್ರಶ್ನಿಸಿದ್ದಾರೆ.
 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಬಿಎಂಪಿ ಮೇಯರ್ ಹಾಗೂ ಉಪಮೇಯರ್ ಚುನಾವಣೆಯಲ್ಲಿ ಮೈತ್ರಿ ಕುರಿತಂತೆ ಬಿಜೆಪಿ ನಾಯಕರು ಏನು ಹೇಳಿದ್ದಾರೆ ನನಗೆ ತಿಳಿದಿಲ್ಲ. ಪಕ್ಷದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ. ಪಕ್ಷದ ಅಭ್ಯರ್ಥಿ ಗೆಲುವಿಗೆ ಕಾರ್ಯತಂತ್ರ ರೂಪಿಸುತ್ತೇವೆ. ಪಕ್ಷದ ಅಭ್ಯರ್ಥಿ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. 
 
ಬಿಬಿಎಂಪಿ ಮೇಯರ್ ಹಾಗೂ ಉಪಮೇಯರ್ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡು ಅಧಿಕಾರ ಹಿಡಿಯಲು ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್ ಸಾಕಷ್ಟು ಕಸರತ್ತು ಮಾಡಿದ್ದವು. ಆದರೆ, ಜೆಡಿಎಸ್ ಪಕ್ಷದೊಂದಿಗೆ ಸೇರಿ ಕಾಂಗ್ರೆಸ್ ಅಧಿಕಾರ ಸ್ಥಾಪಿಸುವುದು ಬಹುತೇಕ ಖಚಿತವಾಗಿದೆ. 
 
ಬಿಜೆಪಿ ಸ್ವಂತ ಬಲದ ಮೇಲೆ ಸ್ಥಾನಗಳಿಸುವವರೆಗೆ ಯಾವುದೇ ಪಕ್ಷದೊಂದಿಗೆ ಮೈತ್ರಿ ಬೇಡ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಜೆಡಿಎಸ್‌ನೊಂದಿಗಿನ ಮೈತ್ರಿಯನ್ನು ಪರೋಕ್ಷವಾಗಿ ತಳ್ಳಿಹಾಕಿದ್ದರು.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ