ಬಿಬಿಎಂಪಿಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮುಂದುವರೆಯಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹಾಗೂ ಕುಮಾರಸ್ವಾಮಿಯವರನ್ನು ಭೇಟಿ ಮಾಡಿ ಚರ್ಚಿಸಿದ್ದರು. ಆದರೆ, ಕುಮಾರಸ್ವಾಮಿ ಅವರು ಮೇಯರ್ ಸ್ಥಾನಕ್ಕೆ ಪಟ್ಟು ಹಿಡಿದಿರುವ ಹಿನ್ನೆಲೆಯಲ್ಲಿ ಇವರ ಭೇಟಿ ಫಲ ನೀಡಿಲ್ಲ ಎನ್ನಲಾಗಿದೆ. ಆದರೆ, ಮುಂಬರುವ ದಿನಗಳಲ್ಲಿ ಮೈತ್ರಿ ಯಾವ ಸ್ವರೂಪ ಪಡೆದುಕೊಳ್ಳುತ್ತದೆ ಎನ್ನುವುದನ್ನು ಕಾದು ನೋಡಬೇಕಾಗಿದೆ.