ದೋಸ್ತಿ ಪಕ್ಷಗಳಿಗೆ ಮೇಯರ್-ಉಪಮೇಯರ್ ಪಟ್ಟ

ಶುಕ್ರವಾರ, 28 ಸೆಪ್ಟಂಬರ್ 2018 (12:49 IST)
ಬೆಂಗಳೂರು: ಬೆಂಗಳೂರು ಮಹಾನಗರ ಪಾಲಿಕೆ ಆಡಳಿತದ ಚುಕ್ಕಾಣಿ ಆಡಳಿತಾರೂಢ ಕಾಂಗ್ರೆಸ್ ಮತ್ತು ಜೆಡಿಎಸ್ ತೆಕ್ಕೆಗೆ ಸೇರಿದೆ.

ಪಾಲಿಕೆಯ ಮೇಯರ್ ಮತ್ತು ಉಪಮೇಯರ್ ಪಟ್ಟ ಮೈತ್ರಿ ಪಕ್ಷದ ಪಾಲಾಗಿದೆ. ಬಿಬಿಎಂಪಿ ನೂತನ ಮೇಯರ್ ಆಗಿ ಗಂಗಾಂಬಿಕೆ ಆಯ್ಕೆಯಾಗಿದ್ದಾರೆ. ಉಪಮೇಯರ್ ಆಗಿ ರಮೀಳಾ ಆಯ್ಕೆಯಾಗಿದ್ದಾರೆ.

ಇದರೊಂದಿಗೆ ಮೇಯರ್ ಪಟ್ಟ ಕಾಂಗ್ರೆಸ್ ಪಾಲಾಗಿದ್ದು, ಉಪಮೇಯರ್ ಸ್ಥಾನ ಜೆಡಿಎಸ್ ಗೆ ಲಭಿಸಿದೆ. ಮೇಯರ್ ಆಯ್ಕೆ ವೇಳೆ ಬಿಜೆಪಿ ಸಭಾತ್ಯಾಗ ನಡೆಸಿದ ಘಟನೆಯೂ ನಡೆಯಿತು. ಬಿಜೆಪಿಯ ಪ್ರಮುಖ ನಾಯಕರು ಗೈರಾಗಿ ಪಕ್ಷಕ್ಕೆ ಹಿನ್ನಡೆ ಉಂಟುಮಾಡಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ