ಇನ್ನು ಕೊರೊನಾ ಮೂರನೇ ಅಲೆ ಮಕ್ಕಳ ಮೇಲೆ ಪ್ರಭಾವ ಬೀರಲಿದೆ ಎಂದು ತಜ್ಞರು ತಿಳಿಸಿದ್ದು, ಇದರಿಂದ ಮಕ್ಕಳಿಗೆ ಸೋಂಕು ಹರಡುವುದನ್ನು ತಡೆಯಲು ಪಾಲಿಕೆ ಕಾರ್ಯತಂತ್ರ ರೂಪಿಸಿದೆ. ಹೀಗಾಗಿ ಸರ್ಕಾರ ಹಾಗೂ ಬಿಬಿಎಂಪಿ ಸಕಲ ಸಿದ್ಧತೆ ಮಾಡಿಕೊಂಡಿದೆ. ಇನ್ನೂ ಕೇಂದ್ರ ಸರ್ಕಾರ 18 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ನೀಡಬಹುದು ಎಂದು ಸೂಚನೆ ನೀಡಿದ್ದು, 2-17 ವರ್ಷದ ಮಕ್ಕಳ ಸರ್ವೇ ಕಾರ್ಯ ಮಾಡಲಾಗಿದೆ. ಮೊದಲ ಹಂತದಲ್ಲಿ 12 ವರ್ಷದಿಂದ 17 ವರ್ಷದ ಮಕ್ಕಳಿಗೆ ಲಸಿಕೆ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ