ಬಿಬಿಎಂಪಿ ಚುನಾವಣೆಗೆ ಸಂಬಂಸಿದಂತೆ ಸುಪ್ರೀಂ ಕೋರ್ಟ್ ಹಸಿರು ನಿಶಾನೆ ತೋರಿದರೆ ಚುನಾವಣೆಗೆ ಪಾಲಿಕೆ ಸಿದ್ಧವಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ತಿಳಿಸಿದ್ದಾರೆ.ನಗರದಲ್ಲಿಂದು ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ನಿರ್ಧಾರ ಸುಪ್ರೀಂ ಕೈಯಲ್ಲಿದೆ. ಒಂದು ವೇಳೆ ಹಸಿರು ನಿಶಾನೆ ತೋರಿದರೆ, ಬಿಬಿಎಂಪಿಯ 243 ವಾರ್ಡ್ ಅಥವಾ 198 ವಾರ್ಡ್‍ಗಳಿಗೆ ಚುನಾವಣೆ ನಡೆಯಲಿದ್ದು, ಈ ಸಂಬಂಧ ಸರ್ಕಾರಕ್ಕೆ ವರದಿ ನೀಡಲಿದ್ದು, ಸುಪ್ರೀಂಕೋರ್ಟ್ ಆದೇಶದಂತೆ ಚುನಾವಣೆ ನಡೆಸಲು ನಾವು ಸಿದ್ಧರಿದ್ದೇವೆ.