ಗಣೇಶ ಹಬ್ಬಕ್ಕೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ಬಿಬಿಎಂಪಿ
ಬೆಂಗಳೂರು:- ಗಣೇಶ ಹಬ್ಬಕ್ಕೆ ಹೊಸ ಮಾರ್ಗಸೂಚಿ ಬಿಬಿಎಂಪಿ ಬಿಡುಗಡೆ ಮಾಡಿದೆ.ಸಾರ್ವಜನಿಕವಾಗಿ ಗಣೇಶ ಕೂರಿಸುವವರು ನಾಲ್ಕು ಅಡಿಗಿಂತ ಎತ್ತರದ ಗಣೇಶ ಮೂರ್ತಿ ಕೂರಿಸುವಂತಿಲ್ಲ.ವಾರ್ಡಿಗೆ ಒಂದರಂತೆ ಗಣೇಶ ಕೂರಿಸಬೇಕು.ಪ್ರತಿಷ್ಟಾಪನೆ ಸ್ಥಳದಲ್ಲಿ 20 ಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ. ಗರಿಷ್ಟ ಮೂರು ದಿನ ಮಾತ್ರ ಹಬ್ಬಕ್ಕೆ ಅವಕಾಶ ಮಾಡಿಕೊಡಲಾಗಿದೆ.ಸಾಮಾಜಿಕ ಅಂತರ ಕಾಯ್ದುಕೊಂಡು ಗಣೇಶನ ದರ್ಶನ ಮಾಡಬೇಕು ಎಂದು ಎಸ್ ಒ ಪಿಯನ್ನ ಬಿಬಿಎಂಪಿ ಬಿಡುಗಡೆ ಮಾಡಿದೆ.