ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಶಾಲೆ ಕಾಲೇಜು ಬಂದ್

ಗುರುವಾರ, 13 ಜನವರಿ 2022 (16:02 IST)
ಬಿಬಿಎಂಪಿ ವ್ಯಾಪ್ತಿಯಲ್ಲಿನ ಕಾಲೇಜು, ಹಾಸ್ಟೆಲ್, ಪಿಜಿಗಳಲ್ಲಿ ಕೊರೊನಾ ಹೆಚ್ಚಾಗುತ್ತಿದ್ದು, ಇದರ ನಿಯಂತ್ರಣಕ್ಕಾಗಿ ಅಂತಹ ಕಾಲೇಜು ಮತ್ತು ಪಿಜಿಗಳನ್ನು ಮುಚ್ಚುವಂತೆ ಬಿಬಿಎಂಪಿ ಆದೇಶಿಸಿದೆ. ಈ ಸಂಬಂಧ ಪಾಲಿಕೆಯ ಎಲ್ಲಾ ವಲಯದ ಆಯುಕ್ತರಿಗೆ ಬಿಬಿಎಂಪಿ ಮುಖ್ಯ ಆಯುಕ್ತರು ಸೂಚನೆ ನೀಡಿದ್ದು, ಇತ್ತೀಚಿನ ದಿನಗಳಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ನಗರದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿದೆ.
ನರ್ಸಿಂಗ್ ಕಾಲೇಜು, ಇನ್ನಿತರೆ ಹಾಸ್ಟೆಲ್ ಹಾಗೂ ಪಿ ಜಿ ಗಳಲ್ಲಿರುವ ವಿದ್ಯಾರ್ಥಿಗಳು, ಸಿಬ್ಬಂದಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಪ್ರಕರಣಗಳು ವರದಿಯಾಗುತ್ತಿವೆ.
 
ಈ ಹಿನ್ನಲೆಯಲ್ಲಿ ಬಿಬಿಎಂಪಿ ವ್ಯಾಪ್ತಿಯ ನರ್ಸಿಂಗ್ ಕಾಲೇಜ್, ಇನ್ನಿತರೆ ಕಾಲೇಜ್ ಗಳು, ಹಾಸ್ಟೆಲ್ ಹಾಗೂ ಪಿ ಜಿ ಗಳಲ್ಲಿ ಇರುವ ವಿದ್ಯಾರ್ಥಿಗಳು, ಸಿಬ್ಬಂದಿಗಳಿಗೆ ಕೋವಿಡ್ ದೃಢಪಟ್ಟರೇ, ಎಲ್ಲಾ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸುವಂತೆ, ಕೋವಿಡ್ ಲಸಿಕೆ ಪಡೆಯುವಂತೆ ಸೂಚಿಸುವಂತೆ ತಿಳಿಸಿದ್ದಾರೆ. ಇನ್ನೂ ಒಂದು ವೇಳೆ ಕಾಲೇಜು, ಹಾಸ್ಟೆಲ್, ಪಿ ಜಿ ಗಳಲ್ಲಿ ಹೆಚ್ಚಿನ ಕೊರೋನಾ ಪ್ರಕರಣಗಳು ವರದಿಯಾದ್ರೇ. ಮುಂಜಾಗ್ರತಾ ಕ್ರಮವಾಗಿ ಸಂಬಂಧಿಸಿದವರಿಗೆ ಸೂಚಿಸಿ, ಮುಚ್ಚುವಂತೆ ಆದೇಶಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ