ಹಿರಿತನದ ಆಧಾರದ ಮೇಲೆ ಬಿಬಿಎಂಪಿ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನ: ರಾಮಲಿಂಗಾರೆಡ್ಡಿ

ಬುಧವಾರ, 19 ಅಕ್ಟೋಬರ್ 2016 (14:18 IST)
ಬಿಬಿಎಂಪಿ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಪಕ್ಷದಲ್ಲಿನ ಹಿರಿತನದ ಆಧಾರದ ಮೇಲೆ ಅವಕಾಶ ನೀಡಲಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧಿಕೃತ ನಿವಾಸ ಕಾವೇರಿಯಲ್ಲಿ ಬಿಬಿಎಂಪಿ ಸ್ಥಾಯಿ ಸಮಿತಿ ಚುನಾವಣೆ ಸಂಬಂಧ ಮಹತ್ವದ ಸಭೆ ನಡೆಸಲಾಯಿತು. ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನವಾಗಿದ್ದು, ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಕುರಿತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹಾಗೂ ಬಿಬಿಎಂಪಿಯ ಹಿರಿಯ ಸದಸ್ಯರು ಸಿಎಂ ಜೊತೆ ಚರ್ಚೆ ನಡೆಸಿದರು. 
 
ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಾರಿಗೆ ಸಚಿವರು, ಸ್ಥಾಯಿ ಸಮಿತಿಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಕುರಿತು ಸಿಎಂ ಸಿದ್ದರಾಮಯ್ಯನವರ ಜೊತೆ ಚರ್ಚಿಸಿದ್ದೇವೆ. ಕಾಂಗ್ರೆಸ್ 4, ಜೆಡಿಎಸ್ 4 ಹಾಗೂ ಪಕ್ಷೇತರರಿಗೆ 4 ಸ್ಥಾಯಿ ಸಮಿತಿಗಳನ್ನು ಹಂಚಲು ನಿರ್ಧರಿಸಲಾಗಿದೆ ಎಂದು ಹೇಳಿದರು. 
 
ಪಕ್ಷದಲ್ಲಿನ ಹಿರಿತನದ ಆಧಾರದ ಮೇಲೆ ಸ್ಥಾಯಿ ಸಮಿತಿಯ ಅಧ್ಯಕ್ಷ ಸ್ಥಾನ ದೊರೆಯುತ್ತದೆ. ಕೆಪಿಸಿಸಿ ಕಚೇರಿಯಲ್ಲಿ ಮತ್ತೊಮ್ಮೆ ಸಭೆ ನಡೆಸಿ ಅಧ್ಯಕ್ಷ ಸ್ಥಾನ ನೀಡವ ಕುರಿತು ತೀರ್ಮಾನ ಮಾಡುತ್ತೇವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ