ಇಂದಿರಾ ಕ್ಯಾಂಟೀನ್ ಹೆಸರನ್ನು ಕೆಂಪೇಗೌಡ ಕ್ಯಾಂಟೀನ್ ಎಂದು ಮರುನಾಮಕರಣಕ್ಕೆ ಮಾಡುವಂತೆ ಶೀಘ್ರದಲ್ಲಿಯೇ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವುದಾಗಿ ಉಪಮೇಯರ್ ರಾಮ್ ಮೋಹನ್ ರಾಜ್ ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ಸದ್ಯ ಇಂದಿರಾ ಕ್ಯಾಂಟೀನ್ ಗೆ ರೀ ಟೆಂಡರ್ ಆಹ್ವಾನಿಸಲಾಗಿದೆ. ಇಂದಿರಾ ಕ್ಯಾಂಟಿನ್ ಎಂದರೇನೆ ಜನ ಊಟಕ್ಕೆ ಹೋಗ್ತಿಲ್ಲ. ಹೀಗಾಗಿ ನಾಡಪ್ರಭು ಕೆಂಪೇಗೌಡರ ಹೆಸರಿಡಲು ಚಿಂತಿಸಿದ್ದೇವೆ ಎಂದು ತಿಳಿಸಿದ್ದಾರೆ.