ರಾತ್ರಿ ಶಾಲೆ ಆರಂಭಿಸಲು ಬಿಬಿಎಂಪಿ ಚಿಂತನೆ

ಗುರುವಾರ, 16 ಜೂನ್ 2022 (20:17 IST)
ಬಿಬಿಎಂಪಿ ಒಂದಿಲ್ಲೊಂದು ಅವಾಂತರ, ಯಡವಟ್ಟು ಮಾಡಿದ್ರೂ ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಯೋಜನೆಗೆ ಮುಂದಾಗಿದೆ. ಪಾಲಿಕೆಯ 198 ವಾರ್ಡ್ಗಳಲ್ಲಿ ಶಿಕ್ಷಣ ವಂಚಿತ ಮಕ್ಕಳಿಗೆ ರಾತ್ರಿ ಶಾಲೆ ಆರಂಭಿಸಲು ಪಾಲಿಕೆ ಚಿಂತನೆ ನಡೆಸಿದೆ. ಕೂಲಿ ಕಾರ್ಮಿಕರ ಮಕ್ಕಳು, ಬಡ ಕುಟುಂಬದ ಮಕ್ಕಳು ಶಾಲೆಗೆ ಬಾರದೆ ದಿನಗೂಲಿಗೆ ಹೋಗ್ತಿದ್ದಾರೆ. ಇಂತಹವರಿಗಾಗಿ ಬಿಬಿಎಂಪಿ ವಿಶೇಷ ಆಯುಕ್ತ ರಾಮ್ ಪ್ರಸಾದ್ ಮನೋಹರ್ ಹೊಸ ಶಿಕ್ಷಣ ಯೋಜನೆ ಜಾರಿಗೆ ತರಲು ಮುಂದಾಗಿದ್ದಾರೆ. ರಾತ್ರಿ ಶಾಲೆ ಆರಂಭಿಸಲು ವಿನೂತನ ಯೋಜನೆಯ ಸಾಧಕ ಭಾದಕಗಳ ಬಗ್ಗೆ ಚರ್ಚೆ ನಡೆಸಿ ಸರ್ಕಾರಕ್ಕೆ ಪ್ರಸ್ತಾವನೆ ಮುಂದಿಡಲಿದ್ದಾರೆ. ಎಲ್ಲವೂ ನಿಗದಿಯಂತೆ ನಡೆದರೆ ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆಯಂದು ಯೋಜನೆಗೆ ಚಾಲನೆ ಸಿಗುವ ಸಾಧ್ಯತೆ ಇದೆ. ಪ್ರತಿ ವಾರ್ಡ್ನ ಸರ್ಕಾರಿ, ಬಿಬಿಎಂಪಿ ಶಾಲೆಗಳಲ್ಲಿ ಕಲಿಕೆ, ಸಂಜೆ 6 ರಿಂದ 9 ಗಂಟೆವರೆಗೆ ಶಾಲೆ ವೇಳಾಪಟ್ಟಿ, ಉಚಿತ ಪಠ್ಯಪುಸ್ತಕ, ಲೇಖನಿ ಸಾಮಗ್ರಿಗಳು, ಸಮವಸ್ತ್ರ ವಿತರಣೆ, ನುರಿತ ಶಿಕ್ಷಕವೃಂದದಿಂದ ಬೋಧನೆ ನೀಡಲಾಗುತ್ತದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ