ತ್ಯಾಜ್ಯ ವಿಲೇವಾರಿ ಶುಲ್ಕ ಪಡೆಯಲು ಮುಂದಾದ ಬಿಬಿಎಂಪಿ

ಮಂಗಳವಾರ, 14 ನವೆಂಬರ್ 2023 (15:48 IST)
ಬಿಬಿಎಂಪಿ ಅನುಮತಿ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಮನೆ ಹಾಗೂ ವಾಣಿಜ್ಯ ಕಟ್ಟಡಗಳಿಂದ ತ್ಯಾಜ್ಯ ಸಂಗ್ರಹ ಮಾಡಲು ಪ್ರತಿ ತಿಂಗಳು ಮಾಸಿಕ ಶುಲ್ಕ ವಿಧಿಸಲು  (ಬಿಬಿಎಂಪಿ) ಮುಂದಾಗಿದೆ. ಈ ಪ್ರಸ್ತಾವನೆಗೆ ರಾಜ್ಯ ಸರ್ಕಾರದಿಂದ  ಅನುಮೋದನೆ ಸಿಕ್ಕರೆ ಕಸ ಸಂಗ್ರಹಣೆ ಮತ್ತು ವಿಲೇವಾರಿಗೆ ನಾಗರಿಕರು ಪ್ರತಿ ತಿಂಗಳು 30 ರೂ. ಪಾವತಿಸಬೇಕು.ಪ್ರಸ್ತಾವಿತ ಯೋಜನೆ ವ್ಯಾಪ್ತಿಗೆ 46 ಲಕ್ಷ ಮನೆಗಳು ಬರುತ್ತವೆ.ಅಂದಾಜು 6.32 ಲಕ್ಷ ವಾಣಿಜ್ಯ ಕಟ್ಟಡಗಳು ಶುಲ್ಕದ ವ್ಯಾಪ್ತಿಗೆ ಬರಲಿದ್ದು,ತಿಂಗಳಿಗೆ ₹ 72.39 ಕೋಟಿ ಆದಾಯದ ನಿರೀಕ್ಷೆ ಇದೆ.

ಮನೆ ಹಾಗೂ ವಾಣಿಜ್ಯ ಕಟ್ಟಡಗಳಲ್ಲಿ ಮಾಸಿಕ ವಿದ್ಯುತ್‌ ಬಳಕೆಯ ಆಧಾರದ ಮೇಲೆ ಶುಲ್ಕ ವಿಧಿಸಲು ಬಿಬಿಎಂಪಿ ಚಿಂತನೆ ನಡೆಸಿದೆ. ಕಳೆದ ವಾರ ಶುಲ್ಕ ರಚನೆ ಅಂತಿಮಗೊಳಿಸಿ ಅನುಮತಿಗಾಗಿ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದ್ದು,ಸರ್ಕಾರ ಒಂದು ವೇಳೆ ಒಪ್ಪಿದರೆ ಕಸಕ್ಕೂ ಶುಲ್ಕ ಇರಲಿದೆ.ಬಿಬಿಎಂಪಿಯು ದೆಹಲಿ, ಚೆನ್ನೈ, ಮುಂಬೈ, ಪುಣೆ, ಇಂದೋರ್ ಮತ್ತು ತಿರುಪತಿ ನಗರಗಳನ್ನು ಉಲ್ಲೇಖಿಸಿದೆ. ಈ ಸ್ಥಳೀಯ ಸಂಸ್ಥೆಗಳು ಈಗಾಗಲೇ ಮನೆ ಹಾಗೂ ವಾಣಿಜ್ಯ ಕಟ್ಟಡಗಳಿಂದ ತ್ಯಾಜ್ಯ ಸಂಗ್ರಹಕ್ಕೆ ಶುಲ್ಕ ಸಂಗ್ರಹಿಸುತ್ತಿವೆ. ಅದನ್ನು ಪ್ರಸ್ತಾವನೆಯಲ್ಲಿ ವಿವರಿಸಲಾಗಿದೆ.
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ