ಹೀಗಾಗಿ ಬಿಬಿಎಂಪಿ ಬೆಂಗಳೂರು ಒನ್ ಸಿಬ್ಬಂದಿಗಳಿಗೆ ತರಬೇತಿ ನೀಡಿ ಬೆಂಗಳೂರು ಒನ್ ಕೇಂದ್ರಗಳಲ್ಲಿ ನಿಗದಿತ ಶುಲ್ಕ ನೀಡಿ ಇ ಖಾತಾ ಮಾಡಿಸಲು ಅವಕಾಶ ನೀಡಿತ್ತು. ಅದರಂತೆ 45 ರೂ. ಶುಲ್ಕ ನಿಗದಿ ಮಾಡಲಾಗಿತ್ತು. ಆದರೆ ಈಗ ಬೆಂಗಳೂರು ಒನ್ ಕೇಂದ್ರದಲ್ಲೂ ಸಾಕಷ್ಟು ಜನ ಬರುತ್ತಿರುವುದರಿಂದ ಮತ್ತು ಜನರಲ್ಲಿರುವ ಗೊಂದಲಗಳಿಂದಾಗಿ ಇಲ್ಲೂ ಇ ಖಾತಾ ಮಾಡಿಸಲು ಕಷ್ಟವಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿದೆ.
ಈ ಹಿನ್ನಲೆಯಲ್ಲಿ ಬಿಬಿಎಂಪಿ ಇ ಖಾತಾ ನೋಂದಾಯಿಸುವ ಹೊಣೆಯನ್ನು ಖಾಸಗಿ ಕಂಪನಿಗೆ ವಹಿಸಲು ಚಿಂತನೆ ನಡೆಸಿದೆ. ಪಾಸ್ ಪೋರ್ಟ್ ಕಚೇರಿ ಮಾದರಿಯಲ್ಲಿ ಇ ಖಾತಾವನ್ನು ಖಾಸಗಿ ಕಂಪನಿಯ ಹೊಣೆಗಾರಿಯಲ್ಲಿ ತಾತ್ಕಾಲಿಕ ಕೇಂದ್ರ ತೆರೆದು ಮಾಡಿಸಲು ಅವಕಾಶ ನೀಡುವ ಬಗ್ಗೆ ಚಿಂತನೆ ನಡೆಸಿದೆ. ಸದ್ಯದಲ್ಲೇ ಈ ವ್ಯವಸ್ಥೆ ಜಾರಿಗೆ ಬರುವ ಸಾಧ್ಯತೆಯಿದ್ದು ಜನರ ಸಮಸ್ಯೆ ಸ್ವಲ್ಪ ಮಟ್ಟಿಗೆ ನಿವಾರಣೆಯಾಗಲಿದೆ.