ಬಿಡಿಎಗೆ 100ಕೋಟಿ ನಷ್ಟ..!!!

ಸೋಮವಾರ, 4 ಜುಲೈ 2022 (15:29 IST)
ಬಿಡಿಎ ಅಧ್ಯಕ್ಷ ಎಸ್. ಆರ್. ವಿಶ್ವವನಾಥ್, "ಬೆಂಗಳೂರು ಪೂರ್ವ ತಾಲೂಕಿನ ಕೆ. ಆರ್. ಪುರ ಹೋಬಳಿಯ ಬಾಣಸವಾಡಿ ಗ್ರಾಮದ ಸರ್ವೆ ಸಂಖ್ಯೆ 73ನಂಬರ್‌ನಲ್ಲಿದ್ದ ಈರಣ್ಣ ಎಂಬುವವರಿಗೆ ಸೇರಿದ 4ಎಕರೆ 13ಗುಂಟೆ ಜಮೀನನ್ನು 1986ರಲ್ಲಿ ಬಿಡಿಎ ಸ್ವಾಧೀನಪಡಿಸಿಕೊಂಡಿತ್ತು. ಇದಕ್ಕೆ ನೀಡಬೇಕಾದ ಪರಿಹಾರ ಮೊತ್ತವನ್ನು ನಾಗರಿಕ ನ್ಯಾಯಾಲಯದಲ್ಲಿ ಠೇವಣಿ ಇಡಲಾಗಿತ್ತು" ಎಂದು ತಿಳಿಸಿದರು.
ನಾಗರಾಜ್ ಎಂಬುವವರು ಈರಣ್ಣ ಅವರ ಬಳಿ ಇದ್ದ ಆಸ್ತಿಯ ಜನರಲ್ ಪವರ್ ಆಫ್ ಅಟಾರ್ನಿ (ಜಿಪಿಎ) ಪಡೆದು ತನ್ನ ಸ್ವಂತ ಜಮೀನು ಎಂದು ತೋರಿಸಿದ್ದಾರೆ. ಅಲ್ಲಿ ಬಡಾವಣೆ ನಿರ್ಮಿಸಿ ಇತರರಿಗೆ ಮಾರಾಟ ಮಾಡಿದ್ದಾರೆ. ಈ ಮಧ್ಯೆ ಕಂದಾಯ ಇಲಾಖೆ ಭೂ ಮಾಲೀಕರಿಂದ ಜಮೀನು ಪಡೆದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ಆ ಮಾಲೀಕರಿಗೆ ಪರ್ಯಾಯ ಭೂಮಿ ವ್ಯವಸ್ಥೆ ಮಾಡಬೇಕೆಂದು ಕೋರಿತ್ತು. ನಿಯಮಾನು ಸಾರ ಸೂಕ್ತ ನಿರ್ಧಾರ ಕೈಗೊಳ್ಳಿ ಎಂದು ನ್ಯಾಯಾಲಯ ಅರ್ಜಿ ವಿಲೇವಾರಿ ಮಾಡಿತ್ತು" ಎಂದು ವಿಶ್ವನಾಥ್ ಹೇಳಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ